ಎರಡನೇ ಟಿ-20 ಪಂದ್ಯ: ಲಂಕಾ ವಿರುದ್ಧ 7 ವಿಕೆಟ್‌ಗಳಿಂದ ಗೆದ್ದು ಬೀಗಿದ ಭಾರತ
ಸಂಘಟಿತ ಪ್ರದರ್ಶನ ತೋರಿದ ಭಾರತ ತಂಡ ಎರಡನೇ ಟಿ-20 ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಏಳು ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿತು. ಆ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 1-0 ಮುನ್ನಡೆ ಪಡೆಯಿತು.

ಇಂದೋರ್: ಸಂಘಟಿತ ಪ್ರದರ್ಶನ ತೋರಿದ ಭಾರತ ತಂಡ ಎರಡನೇ ಟಿ-20 ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಏಳು ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿತು. ಆ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 1-0 ಮುನ್ನಡೆ ಪಡೆಯಿತು.
ಹೋಲ್ಕರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡ ನಿಗದಿತ 20 ಓವರ್‌ಗಳಿಗೆ 9 ವಿಕೆಟ್ ನಷ್ಟಕ್ಕೆ 142 ರನ್ ಗಳಿಸಿ, ಟೀಮ್ ಇಂಡಿಯಾ ಗೆಲುವಿಗೆ 143 ರನ್ ಗುರಿ ನೀಡಿತು.
ಶ್ರೀಲಂಕಾ ನೀಡಿದ 143 ರನ್ ಗುರಿ ಹಿಂಬಾಲಿಸಿದ ಭಾರತ ತಂಡಕ್ಕೆ ಶಿಖರ್ ಧವನ್ ಹಾಗೂ ಕೆ.ಎಲ್ ರಾಹುಲ್ ಜೋಡಿ ಮೊದಲನೇ ವಿಕೆಟ್‌ಗೆ 71 ರನ್ ಗಳಿಸಿ ಭರ್ಜರಿ ಆರಂಭ ನೀಡಿತು.
ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ಮರಳಿದ ಶಿಖರ್ ಧವನ್ ಸಮಯೋಜಿತ ಬ್ಯಾಟಿಂಗ್ ಮಾಡಿದರು. 29 ಎಸೆತಗಳಲ್ಲಿ 32 ರನ್ ಗಳಿಸಿದರು. ಅದ್ಭುತ ಲಯದಲ್ಲಿದ್ದ ಕೆ.ಎಲ್ ರಾಹುಲ್ ಆರಂಭದಿಂದಲೂ ಸ್ಫೋಟಕ ಬ್ಯಾಟಿಂಗ್ ಮಾಡಿದರು. 32 ಎಸೆತಗಳನ್ನು ಎದುರಿಸಿದ ಅವರು ಆರು ಬೌಂಡರಿಯೊಂದಿಗೆ 45 ರನ್ ಸಿಡಿಸಿದರು.
ಉತ್ತಮ ಬ್ಯಾಟಿಂಗ್ ಮುಂದುವರಿಸಿದ್ದ ರಾಹುಲ್ ಅವರನ್ನು ವನಿಂದು ಹಸರಂಗ ಕ್ಲೀನ್ ಬೌಲ್ಡ್ ಮಾಡಿದರು. ಮೂರನೇ ಕ್ರಮಾಂಕದಲ್ಲಿ ಬಡ್ತಿ ಪಡೆದು ಬಂದ ಶ್ರೇಯಸ್ ಅಯ್ಯರ್ ಅವರು 26 ಎಸೆತಗಳಲ್ಲಿ 34 ರನ್ ಗಳಿಸಿದರು. ಕೊನೆಯವರೆಗೂ ಬ್ಯಾಟಿಂಗ್ ಮಾಡಿದ ನಾಯಕ ವಿರಾಟ್ ಕೊಹ್ಲಿ ಕೇವಲ 17 ಎಸೆತಗಳಲ್ಲಿ ಎರಡು ಸಿಕ್ಸರ್ ಹಾಗೂ ಒಂದು ಬೌಂಡರಿಯೊಂದಿಗೆ 30 ರನ್ ಗಳಿಸಿ ತಂಡವನ್ನು ಇನ್ನೂ 15 ಎಸೆತ ಬಾಕಿ ಇರುವಾಗಲೇ ಗೆಲುವಿನ ದಡ ಸೇರಿಸಿದರು.
ಒಟ್ಟಾರೆ, ಭಾರತ 17.3 ಓವರ್ ಗಳಿಗೆ ಮೂರು ವಿಕೆಟ್ ನಷ್ಟಕ್ಕೆ 144 ರನ್ ಗಳಿಸಿ ಜಯದ ನಗೆ ಬೀರಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


