ಕ್ರಿಕೆಟ್

3ನೇ ಟಿ-20: ಶ್ರೀಲಂಕಾ ತಂಡಕ್ಕೆ 202 ರನ್ ಗುರಿ ನೀಡಿದ ಭಾರತ

ಆರಂಭಿಕ ಆಟಗಾರ ಕೆಎಲ್ ರಾಹುಲ್ (54), ಶಿಖರ್ ಧವನ್ (52) ಅವರ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ, ಶ್ರೀಲಂಕಾ ವಿರುದ್ಧದ ಮೂರನೇ ಟಿ-20 ಪಂದ್ಯದಲ್ಲಿ ಸವಾಲಿನ ಮೊತ್ತವನ್ನು ಪ್ರವಾಸಿ ತಂಡಕ್ಕೆ ನೀಡಿದೆ.

3ನೇ ಟಿ-20: ಶ್ರೀಲಂಕಾ ತಂಡಕ್ಕೆ 202 ರನ್ ಗುರಿ ನೀಡಿದ ಭಾರತ
ಕೆಎಲ್ ರಾಹುಲ್
Published On :

ಪುಣೆ: ಆರಂಭಿಕ ಆಟಗಾರ ಕೆಎಲ್ ರಾಹುಲ್ (54), ಶಿಖರ್ ಧವನ್ (52) ಅವರ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ, ಶ್ರೀಲಂಕಾ ವಿರುದ್ಧದ ಮೂರನೇ ಟಿ-20 ಪಂದ್ಯದಲ್ಲಿ ಸವಾಲಿನ ಮೊತ್ತವನ್ನು ಪ್ರವಾಸಿ ತಂಡಕ್ಕೆ ನೀಡಿದೆ.

ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತದ ಆರಂಭಿಕರು ತಂಡಕ್ಕೆ ಭರ್ಜರಿ ಆರಂಭ ನೀಡಿದರು. ಶಿಖರ್, ರಾಹುಲ್ ಜೋಡಿ ಮೊದಲ ಪವರ್ ಪ್ಲೇನಲ್ಲಿ ಸೊಗಸಾದ ಬ್ಯಾಟಿಂಗ್ ನಡೆಸಿದರು. ಈ ಜೋಡಿಯನ್ನು ಬೇರ್ಪಡಿಸಲು ಶ್ರೀಲಂಕಾ ಮಾಡಿಕೊಂಡ ಪ್ಲಾನ್ ಎಲ್ಲ ಉಲ್ಟಾ ಆಯಿತು. ಯಾರ್ಕರ್ ಸ್ಪೆಷಲಿಸ್ಟ್ ಲಸಿತ್ ಮಲಿಂಗ ಅವರನ್ನು ಮನ ಬಂದಂತೆ ದಂಡಿಸಿದರು.

ಈ ಜೋಡಿ 10.5 ಓವರ್ ಗಳಲ್ಲಿ 97 ರನ್ ಗಳ ಜೊತೆಯಾಟದ ಕಾಣಿಕೆ ನೀಡಿತು. ಶಿಖರ್ ಧ ವನ್ 36 ಎಸೆತಗಳಲ್ಲಿ 7 ಬೌಂಡರಿ, 1 ಸಿಕ್ಸರ್ ನೆರವಿನಿಂದ 52 ರನ್ ಸಿಡಿಸಿದರು. ಕನ್ನಡಿಗ ರಾಹುಲ್ 36 ಎಸೆತಗಳಲ್ಲಿ 5 ಬೌಂಡರಿ, 1 ಸಿಕ್ಸರ್ ಸಹಾಯದಿಂದ 54 ರನ್ ಬಾರಿಸಿದರು.

ಮಧ್ಯಮ ಕ್ರಮಾಂಕದಲ್ಲಿ ಸಂಜು ಸ್ಯಾಮ್ಸನ್ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವಲ್ಲಿ ವಿಫಲರಾದರು. ಶ್ರೇಯಸ್ ಸಹ ರನ್ ಬರ ಅನುಭವಿಸಿದರು.

ವಿರಾಟ್ ಕೊಹ್ಲಿ ಹಾಗೂ ಮನೀಷ್ ಪಾಂಡೆ ಜೋಡಿ ತಂಡದ ಮೊತ್ತವನ್ನು ಹಿಗ್ಗಿಸಿತು. ವಿರಾಟ್ ಕೊಹ್ಲಿ 17 ಎಸೆತಗಳಲ್ಲಿ 26 ರನ್ ಬಾರಿಸಿದರು.

ಶಾರ್ದೂಲ್ ಠಾಕೂರ್ ರನ್ ವೇಗಕ್ಕೆ ಚುರುಕು ಮುಟ್ಟಿಸಿದರು. ಕೇವಲ 8 ಎಸೆತಗಳಲ್ಲಿ 1 ಬೌಂಡರಿ, 2 ಸಿಕ್ಸರ್ ಸಹಾಯದಿಂದ ಠಾಕೂರ್ 22 ರನ್ ಬಾರಿಸಿದರು. ಮನೀಷ್ ಅಜೇಯ 31 ರನ್ ಸಿಡಿಸಿದರು. ಅಂತಿಮವಾಗಿ ಭಾರತ 20 ಓವರ್ ಗಳಲ್ಲಿ 6 ವಿಕೆಟ್ ಗೆ 201 ರನ್ ಸೇರಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.