ಲಂಕಾ ವಿರುದ್ಧ ಭಾರತಕ್ಕೆ 78 ರನ್ ಗಳ ಭರ್ಜರಿ ಗೆಲುವು, ಟೀಂ ಇಂಡಿಯಾ ಮುಡಿಗೆ ಟಿ20 ಸರಣಿ
ಆರಂಭಿಕ ಆಟಗಾರ ಕೆಎಲ್ ರಾಹುಲ್ (54) ಹಾಗೂ ಶಿಖರ್ ಧವನ್ (52) ಅವರ ಭರ್ಜರಿ ಅರ್ಧಶತಕಗಳ ನೆರವಿನಿಂದ ಟೀಮ್ ಇಂಡಿಯಾ, ಶ್ರೀಲಂಕಾ ವಿರುದ್ಧದ ಮೂರನೇ ಟಿ-20 ಪಂದ್ಯದಲ್ಲಿ 78ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ

ಪುಣೆ: ಆರಂಭಿಕ ಆಟಗಾರ ಕೆಎಲ್ ರಾಹುಲ್ (54) ಹಾಗೂ ಶಿಖರ್ ಧವನ್ (52) ಅವರ ಭರ್ಜರಿ ಅರ್ಧಶತಕಗಳ ನೆರವಿನಿಂದ ಟೀಮ್ ಇಂಡಿಯಾ, ಶ್ರೀಲಂಕಾ ವಿರುದ್ಧದ ಮೂರನೇ ಟಿ-20 ಪಂದ್ಯದಲ್ಲಿ 78ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಮೂಲಕ ಭಾರತ ಟಿ20 ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತದ ಆರಂಭಿಕರು ತಂಡಕ್ಕೆ ಭರ್ಜರಿ ಆರಂಭ ನೀಡಿದರು. ಶಿಖರ್, ರಾಹುಲ್ ಜೋಡಿ ಮೊದಲ ಪವರ್ ಪ್ಲೇನಲ್ಲಿ ಸೊಗಸಾದ ಬ್ಯಾಟಿಂಗ್ ನಡೆಸಿದರು. ಈ ಜೋಡಿಯನ್ನು ಬೇರ್ಪಡಿಸಲು ಶ್ರೀಲಂಕಾ ಮಾಡಿಕೊಂಡ ಪ್ಲಾನ್ ಎಲ್ಲ ಉಲ್ಟಾ ಆಯಿತು. ಯಾರ್ಕರ್ ಸ್ಪೆಷಲಿಸ್ಟ್ ಲಸಿತ್ ಮಲಿಂಗ ಅವರನ್ನು ಮನ ಬಂದಂತೆ ದಂಡಿಸಿದರು.
ಈ ಜೋಡಿ 10.5 ಓವರ್ ಗಳಲ್ಲಿ 97 ರನ್ ಗಳ ಜೊತೆಯಾಟದ ಕಾಣಿಕೆ ನೀಡಿತು. ಶಿಖರ್ ಧ ವನ್ 36 ಎಸೆತಗಳಲ್ಲಿ 7 ಬೌಂಡರಿ, 1 ಸಿಕ್ಸರ್ ನೆರವಿನಿಂದ 52 ರನ್ ಸಿಡಿಸಿದರು. ಕನ್ನಡಿಗ ರಾಹುಲ್ 36 ಎಸೆತಗಳಲ್ಲಿ 5 ಬೌಂಡರಿ, 1 ಸಿಕ್ಸರ್ ಸಹಾಯದಿಂದ 54 ರನ್ ಬಾರಿಸಿದರು.
ಮಧ್ಯಮ ಕ್ರಮಾಂಕದಲ್ಲಿ ಸಂಜು ಸ್ಯಾಮ್ಸನ್ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವಲ್ಲಿ ವಿಫಲರಾದರು. ಶ್ರೇಯಸ್ ಸಹ ರನ್ ಬರ ಅನುಭವಿಸಿದರು.
ವಿರಾಟ್ ಕೊಹ್ಲಿ ಹಾಗೂ ಮನೀಷ್ ಪಾಂಡೆ ಜೋಡಿ ತಂಡದ ಮೊತ್ತವನ್ನು ಹಿಗ್ಗಿಸಿತು. ವಿರಾಟ್ ಕೊಹ್ಲಿ 17 ಎಸೆತಗಳಲ್ಲಿ 26 ರನ್ ಬಾರಿಸಿದರು.
ಶಾರ್ದೂಲ್ ಠಾಕೂರ್ ರನ್ ವೇಗಕ್ಕೆ ಚುರುಕು ಮುಟ್ಟಿಸಿದರು. ಕೇವಲ 8 ಎಸೆತಗಳಲ್ಲಿ 1 ಬೌಂಡರಿ, 2 ಸಿಕ್ಸರ್ ಸಹಾಯದಿಂದ ಠಾಕೂರ್ 22 ರನ್ ಬಾರಿಸಿದರು. ಮನೀಷ್ ಅಜೇಯ 31 ರನ್ ಸಿಡಿಸಿದರು. ಅಂತಿಮವಾಗಿ ಭಾರತ 20 ಓವರ್ ಗಳಲ್ಲಿ 6 ವಿಕೆಟ್ ಗೆ 201 ರನ್ ಸೇರಿಸಿತು.
ಟೀಂ ಇಂಡಿಯಾ ನೀಡಿದ ಬೃಹತ್ ಮೊತ್ತದ ಬೆನ್ನತ್ತಿದ ಶ್ರೀಲಂಕಾ ಆರಂಭದಿಂದ ವಿಕೆಟ್ ಕಳೆದುಕೊಂಡಿ ಸಾಗಿತು. ಜಸ್ಪ್ರೀತ್ ಬುಮ್ರಾ ಮೊದಲ ಓವರ್ನ ಕೊನೆಯ ಎಸೆತದಲ್ಲಿ ಧನುಷ್ಕಾ ಗುಣತಿಲಕ(1) ಸುಂದರ್ಗೆ ಕ್ಯಾಚ್ ನೀಡಿ ಔಟ್ ಆದರು.
ಇದರ ಬೆನ್ನಲ್ಲೆ ಮುಂದಿನ ಶಾರ್ದೂಲ್ ಠಾಕೂರ್ ಓವರ್ನಲ್ಲಿ ಆವಿಷ್ಕಾ ಫೆರ್ನಾಂಡೊ(9) ಕೂಡ ನಿರ್ಗಮಿಸಿದರೆ, ಓಶಾಡ ಫೆರ್ನಾಂಡೊ(2) ರನೌಟ್ಗೆ ಬಲಿಯಾದರು. ನವ್ದೀಪ್ ಸೈನಿ ತನ್ನ 2ನೇ ಓವರ್ನ ಮೊದಲ ಎಸೆತದಲ್ಲೇ ಕುಶಾಲ್ ಪೆರೇರಾ(7) ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


