ಕ್ರಿಕೆಟ್

ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿ: 16 ಆಟಗಾರರ ಭಾರತ ತಂಡ ಪ್ರಕಟಿಸಿದ ಬಿಸಿಸಿಐ!

ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ನಂತರ ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ಪ್ರವಾಸ ಕೈಗೊಳ್ಳಲಿದ್ದು ಈ ಹಿನ್ನೆಲೆಯಲ್ಲಿ ಟಿ20 ಸರಣಿಗೆ ಬಿಸಿಸಿಐ 16 ಆಟಗಾರರ ಟೀಂ ಇಂಡಿಯಾವನ್ನು...

ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿ: 16 ಆಟಗಾರರ ಭಾರತ ತಂಡ ಪ್ರಕಟಿಸಿದ ಬಿಸಿಸಿಐ!
ಟೀಂ ಇಂಡಿಯಾ
Published On :

ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ನಂತರ ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ಪ್ರವಾಸ ಕೈಗೊಳ್ಳಲಿದ್ದು ಈ ಹಿನ್ನೆಲೆಯಲ್ಲಿ ಟಿ20 ಸರಣಿಗೆ ಬಿಸಿಸಿಐ 16 ಆಟಗಾರರ ಟೀಂ ಇಂಡಿಯಾವನ್ನು ಪ್ರಕಟಿಸಿದ್ದು ಶ್ರೀಲಂಕಾ ತಂಡದಿಂದ ದೂರ ಉಳಿದಿದ್ದ ರೋಹಿತ್ ಶರ್ಮಾ ಮತ್ತೆ ತಂಡವನ್ನು ಸೇರಿಕೊಂಡಿದ್ದಾರೆ.

ಜನವರಿ 24ರಿಂದ ನ್ಯೂಜಿಲ್ಯಾಂಡ್ ವಿರುದ್ಧದ ಟಿ20, ಏಕದಿನ ಮತ್ತು ಟೆಸ್ಟ್ ಸರಣಿಗಳು ಆರಂಭಗೊಳ್ಳಲಿದೆ. ಸದ್ಯ ಟಿ20 ಸರಣಿಗೆ ಬಿಸಿಸಿಐ ತಂಡವನ್ನು ಪ್ರಕಟಿಸಿದ್ದು ತಂಡದಲ್ಲಿ ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ರಿಷಬ್ ಪಂತ್, ಕೆಎಲ್ ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಶಿವಂ ದುಬೆ, ಕುಲದೀಪ್ ಯಾದವ್, ಯಜುವೇಂದ್ರ ಚಹಾಲ್, ವಾಷ್ಟಿಂಗನ್ ಸುಂದರ್, ಜಸ್ ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ರವೀಂದ್ರ ಜಡೇದಾ ಮತ್ತು ಶಾರ್ದೂಲ್ ಠಾಕೂರ್. 

ಅಚ್ಚರಿ ವಿಷಯವೆಂದರೆ ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಗೂ ಕೇರಳದ ಆಟಗಾರ ಸಂಜು ಸ್ಯಾಮ್ಸನ್ ಅವರನ್ನು ಬಿಸಿಸಿಐ ಆಯ್ಕೆಗಾರರು ಕೈಬಿಟ್ಟಿದ್ದಾರೆ. 

ಜನವರಿ 14ರಂದು ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯ ಮುಂಬೈನಲ್ಲಿ ನಡೆಯಲಿದೆ. ಮಧ್ಯಾಹ್ನ 1.30ಕ್ಕೆ ಪಂದ್ಯ ಆರಂಭಗೊಳ್ಳಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.