ಟೀಂ ಇಂಡಿಯಾ-ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಗೆಲ್ಲೋರ್ಯಾರು? ಪಾಂಟಿಂಗ್ ಭವಿಷ್ಯ!
ಜನವರಿ 14ರಂದಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಇನ್ನು ಈ ಸರಣಿಯನ್ನು ಯಾವ ತಂಡ ಗೆಲ್ಲಲಿದೆ ಎಂಬ ಭವಿಷ್ಯವನ್ನು ಮಾಜಿ ಕ್ರಿಕೆಟಿಗ ರಿಕಿ ಪಾಂಟಿಂಗ್ ಹೇಳಿದ್ದಾರೆ.

ಮುಂಬೈ: ಜನವರಿ 14ರಂದಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಇನ್ನು ಈ ಸರಣಿಯನ್ನು ಯಾವ ತಂಡ ಗೆಲ್ಲಲಿದೆ ಎಂಬ ಭವಿಷ್ಯವನ್ನು ಮಾಜಿ ಕ್ರಿಕೆಟಿಗ ರಿಕಿ ಪಾಂಟಿಂಗ್ ಹೇಳಿದ್ದಾರೆ.
ಈ ಹಿಂದೆ ಭಾರತ ಪ್ರವಾಸ ಕೈಗೊಂಡಿದ್ದ ಆಸ್ಟ್ರೇಲಿಯಾ ಆತಿಥೇಯ ಭಾರತದ ವಿರುದ್ಧ ಏಕದಿನ ಕ್ರಿಕೆಟ್ ಸರಣಿಯನ್ನು 3-2 ಅಂತರದಿಂದ ಗೆದ್ದುಕೊಂಡಿತ್ತು. ಅದೇ ರೀತಿ ಈ ಬಾರಿಯೂ ವಿರಾಟ್ ಕೊಹ್ಲಿ ಬಳಗದ ವಿರುದ್ಧ ಆಸ್ಟ್ರೇಲಿಯಾ 2-1 ಅಂತರದಿಂದ ಗೆಲುವು ಸಾಧಿಸಲಿದೆ ಎಂದು ನುಡಿದಿದ್ದಾರೆ.
ಈ ಬಗ್ಗೆ ರಿಕಿ ಪಾಂಟಿಂಗ್ ಟ್ವೀಟ್ ಮಾಡಿದ್ದು ಈ ಸರಣಿಯನ್ನು ಆಸ್ಟ್ರೇಲಿಯಾ 2-1 ಅಂತರದಿಂದ ಗೆಲುವು ಸಾಧಿಸಲಿದೆ. ಈ ಫಲಿತಾಂಶವನ್ನು ನಾವು ಎದುರು ನೋಡುತ್ತಿದ್ದೇವೆ ಎಂದು ಟ್ವೀಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


