ಆಸ್ಟ್ರೇಲಿಯಾ ಬೌಲಿಂಗ್‌ಗೆ ಬೆದರಿದ ಟೀಂ ಇಂಡಿಯಾ 255ಕ್ಕೆ ಆಲೌಟ್!
ಆಸ್ಟ್ರೇಲಿಯಾ ಬೌಲರ್ ಗಳ ಮಾರಕ ದಾಳಿಗೆ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ತತ್ತರಿಸಿದ್ದು 255 ರನ್ ಗಳಿಗೆ ತಂಡ ಆಲೌಟ್ ಆಗಿದೆ.

ಮುಂಬೈ: ಆಸ್ಟ್ರೇಲಿಯಾ ಬೌಲರ್ ಗಳ ಮಾರಕ ದಾಳಿಗೆ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ತತ್ತರಿಸಿದ್ದು 255 ರನ್ ಗಳಿಗೆ ತಂಡ ಆಲೌಟ್ ಆಗಿದೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿದ್ದು 255 ರನ್ ಗಳಿಗೆ ಆಲೌಟ್ ಆಗಿದೆ. ಇನ್ನು ಆಸ್ಟ್ರೇಲಿಯಾಗೆ ಗೆಲ್ಲಲು 256 ರನ್ ಗಳ ಗುರಿ ನೀಡಿದೆ.
ಭಾರತ ಪರ ಶಿಖರ್ ಧವನ್ 74, ಕೆಎಲ್ ರಾಹುಲ್ 47, ವಿರಾಟ್ ಕೊಹ್ಲಿ 16, ರಿಷಬ್ ಪಂತ್ 28 ಮತ್ತು ರವೀಂದ್ರ ಜಡೇಜಾ 25 ರನ್ ಬಾರಿಸಿದ್ದಾರೆ.
ಆಸ್ಟ್ರೇಲಿಯಾ ಪರ ಬೌಲಿಂಗ್ ನಲ್ಲಿ ಸ್ಟಾರ್ಕ್ 3, ಕಮ್ಮಿನ್ಸ್, ರಿಚರ್ಡ್ ಸನ್ ತಲಾ 2 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


