ಕ್ರಿಕೆಟ್

ಆಸ್ಟ್ರೇಲಿಯಾ ವಿರುದ್ಧ ಸಾವಿರ ರನ್ ಪೂರೈಸಿದ ಶಿಖರ ಧವನ್

ಆಸ್ಟ್ರೇಲಿಯಾ ವಿರುದ್ಧ ಸಾವಿರ ರನ್ ಪೂರೈಸಿದ ಶಿಖರ ಧವನ್
ಶಿಖರ್ ಧವನ್
Published On :

ಮುಂಬೈ: ಭಾರತ ತಂಡದ ಆರಂಭಿಕ ಬ್ಯಾಟ್ಸ್‌ ಮನ್ ಶಿಖರ್ ಧವನ್ ಆಸ್ಟ್ರೇಲಿಯಾ ವಿರುದ್ಧ ಏಕದಿನ ಕ್ರಿಕೆಟ್ ನಲ್ಲಿ ಸಾವಿರ ರನ್‌ಗಳ ಸಾಧನೆ ಮಾಡಿದ್ದಾರೆ.

ಮಂಗಳವಾರ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲನೇ ಏಕದಿನ ಪಂದ್ಯದಲ್ಲಿ ಎಡಗೈ ಬ್ಯಾಟ್ಸ್‌‌ಮನ್ ಈ ಸಾಧನೆಗೆ ಭಾಜನರಾದರು. ಈ ಮೂಲಕ ಸಾವಿರ ರನ್ ಗಳಿಸಿದ ಐದನೇ ಭಾರತೀಯ ಆಟಗಾರ ಎಂಬ ಗೌರವಕ್ಕೆ ಪಾತ್ರರಾದರು.

ರೋಹಿತ್ ಶರ್ಮಾ ಅವರೊಂದಿಗೆ ಆರಂಭಿಕನಾಗಿ ಕಣಕ್ಕೆ ಇಳಿದ ಶಿಖರ್ ಧವನ್ 91 ಎಸೆತಗಳಲ್ಲಿ ಒಂದು ಸಿಕ್ಸರ್ ಹಾಗೂ ಒಂಬತ್ತು ಬೌಂಡರಿಗಳೊಂದಿಗೆ 74 ರನ ಗಳಿಸಿದರು. ನಂತರ, ಪ್ಯಾಟ್ ಕಮಿನ್ಸ್ ಗೆ ವಿಕೆಟ್ ಒಪ್ಪಿಸಿದರು. ಇದರೊಂದಿಗೆ ಈ ಸಾಧನೆ ಮಾಡಿರುವ ಸಚಿನ್ ತೆಂಡೂಲ್ಕರ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಮಹೇಂದ್ರ ಸಿಂಗ್ ಧೋನಿ ಅವರ ಕ್ಲಬ್‌ಗೆ ಇದೀಗ ಧವನ್ ಸೇರ್ಪಡೆಯಾದರು.

ದೆಹಲಿಯ ಆಟಗಾರ ಆಸ್ಟ್ರೇಲಿಯಾ ವಿರುದ್ಧ 25 ಇನಿಂಗ್ಸ್‌‌ಗಳಲ್ಲಿ 43.86ರ ಸರಾಸರಿಯಲ್ಲಿ ಸಹಸ್ರ ರನ್ ಸಾಧನೆ ಮಾಡಿದ್ದಾರೆ. ಇದರಲ್ಲಿ ನಾಲ್ಕು ಶತಕ ಹಾಗೂ ಐದು ಅರ್ಧಶತಕಗಳು ಒಳಗೊಂಡಿವೆ. ಜತೆಗೆ, ಏಕದಿನ ಕ್ರಿಕೆಟ್ ನಲ್ಲಿ ಇವರ 28ನೇ ಅರ್ಧಶತಕ ಇದಾಯಿತು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.