ಕ್ರಿಕೆಟ್

ಆಸೀಸ್ ವಿರುದ್ಧದ 2ನೇ ಏಕದಿನ ಪಂದ್ಯದಿಂದ ರಿಷಬ್ ಪಂತ್ ಔಟ್, ಕೀಪರ್ ಯಾರು?

ಜನವರಿ 17ರಂದು ರಾಜ್‌ಕೋಟ್ ನಲ್ಲಿ ನಡೆಯುವ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಿಂದ ವಿಕೆಟ್ ಕೀಪರ್ ಬ್ಯಾಟ್ಸ್‌‌ಮನ್ ರಿಷಬ್ ಪಂತ್ ಹೊರಗುಳಿಯಲಿದ್ದಾರೆ.

ಆಸೀಸ್ ವಿರುದ್ಧದ 2ನೇ ಏಕದಿನ ಪಂದ್ಯದಿಂದ ರಿಷಬ್ ಪಂತ್ ಔಟ್, ಕೀಪರ್ ಯಾರು?
ರಿಷಬ್ ಪಂತ್
Published On :

ಮುಂಬೈ: ಜನವರಿ 17ರಂದು ರಾಜ್‌ಕೋಟ್ ನಲ್ಲಿ ನಡೆಯುವ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಿಂದ ವಿಕೆಟ್ ಕೀಪರ್ ಬ್ಯಾಟ್ಸ್‌‌ಮನ್ ರಿಷಬ್ ಪಂತ್ ಹೊರಗುಳಿಯಲಿದ್ದಾರೆ.

ಮಂಗಳವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದಿದ್ದ ಮೊದನೇ ಏಕದಿನ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್‌ ಎಸೆತದಲ್ಲಿ ಚೆಂಡು ಪಂತ್ ಹೆಲ್ಮೇಟ್‌ಗೆ ಬಡಿದಿತ್ತು. ಪರಿಣಾಮ ಗಾಯವಾಗಿತ್ತು. ಈ ಹಿನ್ನಲೆಯಲ್ಲಿ ಅವರು ಆ ಪಂದ್ಯದಲ್ಲಿ ಅವರು ವಿಕೆಟ್ ಕೀಪಿಂಗ್ ಮಾಡಿರಲಿಲ್ಲ. ಅವರ ಸ್ಥಾನದಲ್ಲಿ ಕೆ.ಎಲ್ ರಾಹುಲ್ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿಭಾಯಿಸಿದ್ದರು.

ಪಂತ್ ತಲೆಗೆ ಚೆಂಡು ತಾಗಿ ಪೆಟ್ಟಾದ ಬಳಿಕ ಅವರನ್ನು ಚಿಕಿತ್ಸೆಗೆ ಒಳಪಡಿಸಲಾಗಿತ್ತು. ರಾತ್ರಿಯಿಡಿ ಅವರ ಮೇಲೆ ತೀವ್ರ ನಿಗಾ ವಹಿಸಲಾಗಿತ್ತು. ಬುಧವಾರ ಅವರನ್ನು ಆಸ್ಪತ್ರೆಯಿಂದ ಡಿಶ್ಚಾರ್ಜ್ ಮಾಡಿದ ಬಳಿಕ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ)ಯಲ್ಲಿ  ಪುನಶ್ಚೇತನ ಕಾರ್ಯಕ್ಕೆ ಕಳುಹಿಸಿಕೊಡಲಾಗಿದೆ ಎಂದು ಬಿಸಿಸಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.