ಯೋ-ಯೋ ಟೆಸ್ಟ್ ನಲ್ಲಿ ಪೃಥ್ವಿ ಶಾ ಪಾಸ್
ಸ್ಟಾರ್ ಯುವ ಆಟಗಾರ ಪೃಥ್ವಿ ಶಾ ಅವರು ದೈಹಿಕ ಪರೀಕ್ಷೆಯಲ್ಲಿ ಪಾಸ್ ಆಗಿದ್ದು, ಭಾರತ “ಎ” ತಂಡ ಸೇರುವ ಸಾಧ್ಯತೆ ಇದೆ.

ನವದೆಹಲಿ: ಸ್ಟಾರ್ ಯುವ ಆಟಗಾರ ಪೃಥ್ವಿ ಶಾ ಅವರು ದೈಹಿಕ ಪರೀಕ್ಷೆಯಲ್ಲಿ ಪಾಸ್ ಆಗಿದ್ದು, ಭಾರತ “ಎ” ತಂಡ ಸೇರುವ ಸಾಧ್ಯತೆ ಇದೆ. ಶಾ ಅವರು ಭುಜದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದರು. ಕರ್ನಾಟಕ ವಿರುದ್ಧದ ರಣಜಿ ಪಂದ್ಯದಲ್ಲಿ ಕ್ಷೇತ್ರರಕ್ಷಣೆ ಮಾಡುವಾಗ ಪೃಥ್ವಿ ಶಾ ಬಿದ್ದು ಗಾಯಕ್ಕೆ ತುತ್ತಾಗಿದ್ದರು. “ಮಂಗಳವಾರ ನಡೆದ ಯೋ-ಯೋ ಟೆಸ್ಟ್ ನಲ್ಲಿ ಪಾಸ್ ಆಗಿದ್ದಾರೆ.
ಇವರು ಜ.16 ಅಥವಾ 17ರಂದು ಜವರಿಯಲ್ಲಿ ಭಾರತ ಕಿರಿಯರ ತಂಡ ಸೇರಬಹುದು” ಎಂದು ಮೂಲಗಳು ತಿಳಿಸಿವೆ. ಶಾ ಅವರು ಎರಡು ಅಭ್ಯಾಸ ಪಂದ್ಯದಲ್ಲಿ ಆಡುವುದಿಲ್ಲ. ಆದರೆ ಕಿವೀಸ್ ವಿರುದ್ಧದ ಜ.22 ರಂದು ನಡೆಯಲಿರುವ ಪಂದ್ಯದಲ್ಲಿ ಭಾರತ ತಂಡ ಸೇರಿಕೊಳ್ಳಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


