ಎಂಎಸ್ ಧೋನಿಯ ವಿಶ್ವದಾಖಲೆ ಮುರಿದ ವಿರಾಟ್, ದಾಖಲೆ ಬರೆಯುವುದರಲ್ಲಿ ಕೊಹ್ಲಿಗೆ ಸರಿಸಾಟಿ ಯಾರಿಲ್ಲ!
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಚಿನ್ನಸ್ವಾಮಿ ಅಂಗಳದಲ್ಲಿ ಮತ್ತೊಂದು ದಾಖಲೆಗೆ ತಮ್ಮ ಹೆಸರು ನಮೂದಿಸಿದ್ದಾರೆ.

ಬೆಂಗಳೂರು: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಚಿನ್ನಸ್ವಾಮಿ ಅಂಗಳದಲ್ಲಿ ಮತ್ತೊಂದು ದಾಖಲೆಗೆ ತಮ್ಮ ಹೆಸರು ನಮೂದಿಸಿದ್ದಾರೆ.
ಇಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರನೇ ಏಕದಿನ ಪಂದ್ಯದಲ್ಲಿ, ಆಸೀಸ್ ನೀಡಿದ್ದ ಗುರಿಯನ್ನು ಬೆನ್ನಟ್ಟಿದ ವೇಳೆ ವಿರಾಟ್ ಈ ಸಾಧನೆ ಮಾಡಿದ್ದಾರೆ.
ಆಸೀಸ್ ವೇಗಿ ಮಿಚೆಲ್ ಸ್ಟಾರ್ಕ್ ಎಸೆದ ಪಂದ್ಯದ 23ನೇ ಓವರ್ ನ ಮೂರನೇ ಎಸೆತದಲ್ಲಿ ರನ್ ಮಷೀನ್ ಖ್ಯಾತಿಯ ಕೊಹ್ಲಿ, ಬೌಂಡರಿ ಬಾರಿಸಿದರು. ಈ ಮೂಲಕ ಏಕದಿನ ಕ್ರಿಕೆಟ್ ನಲ್ಲಿ ವೇಗವಾಗಿ 5000 ರನ್ ಕಲೆ ಹಾಕಿದ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಇನ್ನು ಎಂಎಸ್ ಧೋನಿ ನಾಯಕನಾಗಿ 127 ಇನ್ನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದ್ದರು. ಆದರೆ ಕೊಹ್ಲಿ 82 ಇನ್ನಿಂಗ್ಸ್ ನಲ್ಲಿ 5 ರನ್ ಪೂರೈಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


