ಭಾರತ ತಂಡದ ಬ್ಯಾಟಿಂಗ್ ವಿಭಾಗವನ್ನು ಕೊಂಡಾಡಿದ ರವಿಶಾಸ್ತ್ರಿ
ಮೊದಲನೇ ಪಂದ್ಯದಲ್ಲಿ 10 ವಿಕೆಟ್ ಗಳ ಹೀನಾಯ ಸೋಲಿನ ಹೊರತಾಗಿಯೂ ಮೂರನೇ ಪಂದ್ಯದಲ್ಲಿ ಏಳು ವಿಕೆಟ್ ಗಳಿಂದ ಗೆದ್ದು 2-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿರುವ ಭಾರತ ತಂಡದ ಪ್ರದರ್ಶನವನ್ನು ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ ಶ್ಲಾಘಿಸಿದ್ದಾರೆ.

ಬೆಂಗಳೂರು: ಮೊದಲನೇ ಪಂದ್ಯದಲ್ಲಿ 10 ವಿಕೆಟ್ ಗಳ ಹೀನಾಯ ಸೋಲಿನ ಹೊರತಾಗಿಯೂ ಮೂರನೇ ಪಂದ್ಯದಲ್ಲಿ ಏಳು ವಿಕೆಟ್ ಗಳಿಂದ ಗೆದ್ದು 2-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿರುವ ಭಾರತ ತಂಡದ ಪ್ರದರ್ಶನವನ್ನು ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ ಶ್ಲಾಘಿಸಿದ್ದಾರೆ.
ಪಂದ್ಯದ ಬಳಿಕ ಟಿವಿ ವಾಹಿನಿವೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು, ”ನಮ್ಮ ತಂಡದ ಆಟಗಾರರು ಅದ್ಭುತ ಪ್ರದರ್ಶನ ತೋರಿದರು. ಮುಂಬೈ ಪಂದ್ಯದಲ್ಲಿನ ಸೋಲು, ಸತತ ಮೂರೂ ಪಂದ್ಯಗಳಲ್ಲಿನ ಟಾಸ್ ಸೋತರೂ ನಮ್ಮವರು ಎರಡೂ ಪಂದ್ಯಗಳಲ್ಲಿ ಸತತವಾಗಿ ಗೆದ್ದು ಸರಣಿಯನ್ನು ವಶಪಡಿಸಿಕೊಂಡಿದ್ದಾರೆ. ನಾವು ಕೆಳಮಟ್ಟದ ತಂಡದ ವಿರುದ್ಧ ಆಡಿದ್ದೇವೆ ಎಂದು ಯಾರೂ ಹೇಳಲಾರರು,” ಎಂದು ತಿಳಿಸಿದರು.
ಭಾನುವಾರದ ಪಂದ್ಯದ ಡೆತ್ ಓವರ್ ಗಳಲ್ಲಿ ಮೊಹಮ್ಮದ್ ಶಮಿ ಶತಕ ಗಳಿಸಿದ್ದ ಸ್ಟೀವನ್ ಸ್ಮಿತ್ ಸೇರಿದಂತೆ ಮೂರು ವಿಕೆಟ್ ಕಿತ್ತರು. ಇದರಿಂದ ಆಸ್ಟ್ರೇಲಿಯಾ ತಂಡವನ್ನು 286/9 ಕ್ಕೆ ನಿಯಂತ್ರಿಸಲಾಗಿತ್ತು. ಆದರೆ, 27 ಇತರ ರನ್ ನೀಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


