ಹಿಟ್ ಮ್ಯಾನ್ 'ರೋಹಿತ್ ಶರ್ಮಾ'ರ ಸೂಪರ್ ಸೆಂಚುರಿ- ವಿಡಿಯೋ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಆಸ್ಟ್ರೇಲಿಯಾ ವಿರುದ್ದದ ಏಕದಿನ ಕ್ರಿಕೆಟ್ ಸರಣಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಶತಕ ಸಿಡಿಸಿದ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್ ನಲ್ಲಿ 9 ಸಾವಿರ ರನ್ ಪೂರೈಸಿದರು.

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಆಸ್ಟ್ರೇಲಿಯಾ ವಿರುದ್ದದ ಏಕದಿನ ಕ್ರಿಕೆಟ್ ಸರಣಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಶತಕ ಸಿಡಿಸಿದ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್ ನಲ್ಲಿ 9 ಸಾವಿರ ರನ್ ಪೂರೈಸಿದರು.
ರೋಹಿತ್ ರೋಹಿತ್ ಶರ್ಮಾ 128 ಎಸೆತಗಳಲ್ಲಿ 8 ಬೌಂಡರಿ , 6 ಸಿಕ್ಸರ್ ಮೂಲಕ 119ರನ್ ಬಾರಿಸಿದರು. ಏಳು ವರ್ಷಗಳ ಹಿಂದೆ ಇದೇ ಅಂಗಳದಲ್ಲಿ ತಾವು ಬಾರಿಸಿದ್ದ ದ್ವಿಶತಕವನ್ನು ನೆನಪಿಗೆ ತರುವಂತೆ ಆಡಿದ ರೋಹಿತ್ ಶರ್ಮಾ, ಸಿಕ್ಸರ್ ಗಳ ಸಿಕ್ಸರ್ ಸಾಧನೆ ಮಾಡಿದರು.
56 ಎಸೆತಗಳಲ್ಲಿ ಅರ್ಧಶತಕ ಹೊಡೆದ ಅವರು, ಒಟ್ಟು 110 ಎಸೆತಗಳಲ್ಲಿ ಏಕದಿನ ಕ್ರಿಕೆಟ್ ನಲ್ಲಿ ತಮ್ಮ 29 ನೇ ಶತಕವನ್ನು ದಾಖಲಿಸಿದರು. ಈ ಮೂಲಕ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಟೀಂ ಇಂಡಿಯಾ ಕೈ ವಶ ಮಾಡಿಕೊಳ್ಳುವಲ್ಲಿ ರೋಹಿತ್ ಶರ್ಮಾ ಬಹು ಮುಖ್ಯ ಕೊಡುಗೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


