3ನೇ ಟಿ20 ಪಂದ್ಯ ಟೈ: ಸೂಪರ್ ಓವರ್‌ನಲ್ಲಿ ಗೆದ್ದು ಇತಿಹಾಸ ಬರೆದ ಭಾರತ
ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಟಿ20 ಪಂದ್ಯ ಟೈನಲ್ಲಿ ಅಂತ್ಯವಾಗಿದ್ದು ನಂತರದ ಸೂಪರ್ ಓವರ್ ನಲ್ಲಿ ಗೆಲುವು ಸಾಧಿಸುವ ಮೂಲಕ ಟೀಂ ಇಂಡಿಯಾ ಇತಿಹಾಸ ನಿರ್ಮಿಸಿದೆ.

ಹಮಿಲ್ಟನ್: ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಟಿ20 ಪಂದ್ಯ ಟೈನಲ್ಲಿ ಅಂತ್ಯವಾಗಿದ್ದು ನಂತರದ ಸೂಪರ್ ಓವರ್ ನಲ್ಲಿ ಗೆಲುವು ಸಾಧಿಸುವ ಮೂಲಕ ಟೀಂ ಇಂಡಿಯಾ ಇತಿಹಾಸ ನಿರ್ಮಿಸಿದೆ.
ಹಮಿಲ್ಟನ್ ನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡಿದ್ದು ರೋಹಿತ್ ಶರ್ಮಾರ ಭರ್ಜರಿ ಬ್ಯಾಟಿಂಗ್ ನೆರವಿನಿಂದ 179 ರನ್ ಪೇರಿಸಿತು.
ಭಾರತ ನೀಡಿದ 180 ಗುರಿ ಬೆನ್ನಟ್ಟಿದ ನ್ಯೂಜಿಲ್ಯಾಂಡ್ 6 ವಿಕೆಟ್ ನಷ್ಟಕ್ಕೆ 179 ರನ್ ಪೇರಿಸಿದ್ದರಿಂದ ಪಂದ್ಯ ಟೈ ಆಯಿತು. ಇದರಿಂದ ಸೂಪರ್ ಓವರ್ ನೀಡಲಾಯಿತು. ಅದರಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ 6 ಎಸೆತಗಳಲ್ಲಿ 17 ರನ್ ಪೇರಿಸಿದ್ದರು. 18 ರನ್ ಗುರಿ ಬೆನ್ನಟ್ಟಿದ ಭಾರತ 20 ರನ್ ಬಾರಿಸಿ ಗೆಲುವಿನ ನಗೆ ಬೀರಿತು. ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಮಾಡಿ ಕೊನೆಯ ಎರಡು ಎಸೆತಗಳಲ್ಲಿ 2 ಸಿಕ್ಸರ್ ಬಾರಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ಅದಾಗಲೇ ಎರಡು ಪಂದ್ಯಗಳನ್ನು ಗೆದ್ದುಕೊಂಡಿದೆ. ಇಲ್ಲಿಯವರೆಗೂ ನ್ಯೂಜಿಲ್ಯಾಂಡ್ ನಲ್ಲಿ ಭಾರತ ಒಂದೇ ಒಂದು ಟಿ20 ಸರಣಿಯನ್ನು ಗೆದ್ದಿರಲಿಲ್ಲ. ಆದರೆ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಮೊದಲ ಬಾರಿಗೆ ಸರಣಿ ಗೆದ್ದು ಇತಿಹಾಸ ನಿರ್ಮಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


