2020 ಏಷ್ಯಾ ಕಪ್ ರದ್ದು: ಬಿಸಿಸಿಐ ಅಧ್ಯಕ್ಷ ಗಂಗೂಲಿ ಸ್ಪಷ್ಟನೆ
ಏಷ್ಯಾಕಪ್ 2020 ರದ್ದತಿಯನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರು ಪ್ರಕಟಿಸಿದ್ದಾರೆ.

ನವದೆಹಲಿ: ಏಷ್ಯಾಕಪ್ 2020 ರದ್ದತಿಯನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರು ಪ್ರಕಟಿಸಿದ್ದಾರೆ.
ಜುಲೈ 9 ರಂದು ನಡೆಯಲಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಸಭೆಯ ಮುನ್ನ ಗಂಗೂಲಿ ಈ ಘೋಷಣೆ ಮಾಡಿದ್ದಾರೆ. ಆದರೆ, ಎಸಿಸಿ ಈ ನಿರ್ಧಾರ ತೆಗೆದುಕೊಂಡಿದೆಯೇ ಎಂದು ಅವರು ಹೇಳಲಿಲ್ಲ.
ಎಸಿಸಿ ಅಧ್ಯಕ್ಷ ನಜ್ಮುಲ್ ಹಸನ್ ಏಷ್ಯಾಕಪ್ 2020 ಕುರಿತು ಯಾವುದೇ ಹೇಳಿಕೆ ನೀಡಿದಿದ್ದರೂ ಬಿಸಿಸಿಐ ಅಧ್ಯಕ್ಷ ಗಂಗೂಲಿ ಸ್ಪೋರ್ಟ್ಸ್ ತಕ್ ಜೊತೆ ಮಾಡನಾಡುತ್ತಾ ಈ ವಿಷಯವನ್ನು ದೃಢಪಡಿಸಿದ್ದಾರೆ.
ವಿಶ್ವದಾದ್ಯಂತ ಕೊರೋನಾ ಮಹಾಮಾರಿ ವ್ಯಾಪಕವಾಗಿ ಹರಡುತ್ತಿದ್ದು ಈ ಹಿನ್ನೆಲೆಯಲ್ಲಿ ಏಷ್ಯಾಕಪ್ ಟೂರ್ನಿಯನ್ನು ರದ್ದು ಮಾಡಲಾಗಿದೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಆತಿಥ್ಯದಲ್ಲಿ ಇದೇ ಸೆಪ್ಟೆಂಬರ್ ನಲ್ಲಿ ಯುಎಇಯಲ್ಲಿ ಏಷ್ಯಾಕಪ್ ಟೂರ್ನಿ ನಿಗದಿಯಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


