ಬಿಸಿಸಿಐ ಮಧ್ಯಂತರ ಸಿಇಓ ಆಗಿ ಹೆಮಂಗ್ ಅಮಿನ್ ನೇಮಕ
ಇಂಡಿಯನ್ ಪ್ರೀಮಿಯರ್ ಲೀಗ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಮಂಗ್ ಅಮಿನ್ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಮಧ್ಯಂತರ ಸಿಇಓ ಆಗಿ ಬಿಸಿಸಿಐ ನೇಮಕ ಮಾಡಿದೆ. "ಹೆಮಂಗ್ ಅಮಿನ್ ಅವರನ್ನು ಬಿಸಿಸಿಐನ ಮಧ್ಯಂತರ ಸಿಇಓ ಆಗಿ ನೇಮಕ ಮಾಡಲಾಗಿದೆ ಎಂದು ಬಿಸಿಸಿಐ ಮೂಲಗಳು ಎಎನ್‌ಐಗೆ ತಿಳಿಸಿದೆ.

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಮಂಗ್ ಅಮಿನ್ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಮಧ್ಯಂತರ ಸಿಇಓ ಆಗಿ ಬಿಸಿಸಿಐ ನೇಮಕ ಮಾಡಿದೆ. "ಹೆಮಂಗ್ ಅಮಿನ್ ಅವರನ್ನು ಬಿಸಿಸಿಐನ ಮಧ್ಯಂತರ ಸಿಇಓ ಆಗಿ ನೇಮಕ ಮಾಡಲಾಗಿದೆ ಎಂದು ಬಿಸಿಸಿಐ ಮೂಲಗಳು ಎಎನ್‌ಐಗೆ ತಿಳಿಸಿದೆ.
ಕಳೆದ ವಾರ ರಾಹುಲ್ ಜೊಹ್ರಿ ಅವರ ಸಿಇಓ ಹುದ್ದೆಯ ರಾಜೀನಾಮೆಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಂಗೀಕರಿಸಿತ್ತು."ಹಲವು ತಿಂಗಳುಗಳ ಹಿಂದೆಯೇ ರಾಹುಲ್ ಜೊಹ್ರಿ ಬಿಸಿಸಿಐ ಸಿಇಓ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಆದರೆ, ಅವರ ರಾಜೀನಾಮೆಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇತ್ತೀಚಿಗೆ ಸ್ವೀಕರಿಸಿದೆ ಎಂದು ಮೂಲಗಳು ತಿಳಿಸಿವೆ.
ಶಶಾಂಕ್ ಮನೋಹರ್ ಅಧ್ಯಕ್ಷರಾಗಿದ್ದಾಗ 2016ರಲ್ಲಿಯೇ ರಾಹುಲ್ ಜೊಹ್ರಿ ಅವರನ್ನು ಬಿಸಿಸಿಐ ಸಿಇಓ ಹುದ್ದೆಗೆ ನೇಮಕ ಮಾಡಲಾಗಿತ್ತು. ಕಳೆದ 4 ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದ ಜೊಹ್ರಿ, ಬಿಸಿಸಿಐ ಹುದ್ದೆಯಿಂದ ದೂರ ಉಳಿಯಲು ಕಳೆದ ಹಲವು ತಿಂಗಳುಗಳ ಹಿಂದೆಯೇ ನಿರ್ಧರಿಸಿ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಅವರ ರಾಜೀನಾಮೆ ಅಂಗೀಕಾರವಾಗಿದೆ.
ಕೊರೊನಾ ವೈರಸ್ ಇಡೀ ವಿಶ್ವದಾದ್ಯಂತ ವ್ಯಾಪಕವಾಗಿ ಹರಡುತ್ತಿದ್ದರಿಂದ ಕಳೆದ ಮಾರ್ಚ್‌ತಿಂಗಳಿನಿಂದ ಭಾರತ ತಂಡ, ಯಾವುದೇ ಕ್ರಿಕೆಟ್ ಪಂದ್ಯವಾಡದೆ ದೂರ ಉಳಿದಿದೆ. ಕಳೆದ ವಾರ ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವೆ ಟೆಸ್ಟ್ ಸರಣಿಯ ಮೊದಲ ಪಂದ್ಯವಾಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಪುನಾರಂಭವಾಗಿತ್ತು. ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ನಾಲ್ಕು ವಿಕೆಟ್‌ಗಳಿಂದ ಜಯ ಸಾಧಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


