ಗಂಭೀರ್ ರನ್ನು ಓರ್ವ ಬ್ಯಾಟ್ಸ್ ಮನ್ ಆಗಿ ಇಷ್ಟಪಡುತ್ತೇನೆ, ಆದರೆ?: ಮತ್ತೆ ಖ್ಯಾತೆ ತೆಗೆದ ಅಫ್ರಿದಿ
ಟೀಂ ಇಂಡಿಯಾದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಗೌತಮ್ ಗಂಭೀರ್ ಮತ್ತು ಪಾಕ್‌ನ ಮಾಜಿ ಆಲ್‌ರೌಂಡರ್ ಶಾಹಿದ್ ಅಫ್ರಿದಿ ನಡುವೆ 2007ರಲ್ಲಿ ನಾಗ್ಪುರದಲ್ಲಿ ನಡೆದ ಭಾರತ vs ಪಾಕಿಸ್ತಾನ ನಡುವಣ ಏಕದಿನ ಕ್ರಿಕೆಟ್ ಪಂದ್ಯದ ಬಳಿಕ ಮುಸುಕಿನ ಗುದ್ದಾಟ ನಡೆಯುತ್ತಲೇ ಬಂದಿದೆ.

ನವದೆಹಲಿ: ಟೀಂ ಇಂಡಿಯಾದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಗೌತಮ್ ಗಂಭೀರ್ ಮತ್ತು ಪಾಕ್‌ನ ಮಾಜಿ ಆಲ್‌ರೌಂಡರ್ ಶಾಹಿದ್ ಅಫ್ರಿದಿ ನಡುವೆ 2007ರಲ್ಲಿ ನಾಗ್ಪುರದಲ್ಲಿ ನಡೆದ ಭಾರತ vs ಪಾಕಿಸ್ತಾನ ನಡುವಣ ಏಕದಿನ ಕ್ರಿಕೆಟ್ ಪಂದ್ಯದ ಬಳಿಕ ಮುಸುಕಿನ ಗುದ್ದಾಟ ನಡೆಯುತ್ತಲೇ ಬಂದಿದೆ.
ಸೋಷಿಯಲ್ ಮೀಡಿಯಾಗಳಲ್ಲಿ ಈ ಇಬ್ಬರೂ ಆಟಗಾರರು ಮನಬಂದ ರೀತಿಯಲ್ಲಿ ಕಿತ್ತಾಡಿಕೊಂಡ ಹಲವು ಉದಾಹರಣೆಗಳು ಇವೆ. ಆದರೆ ಇದೀಗ ಕೊಂಚ ವರಸೆ ಬದಲಾಯಿಸಿದರುವ ಪಾಕ್‌ನ ಮಾಜಿ ಆಲ್‌ರೌಂಡರ್ ಅಫ್ರಿದಿ, ತಾವು ಗೌತಮ್ ಗಂಭೀರ್ ಅವರನ್ನು ಒಬ್ಬ ಬ್ಯಾಟ್ಸ್‌ಮನ್ ಆಗಿ ಇಷ್ಟ ಪಡುತ್ತೇನೆ ಎಂದಿದ್ದಾರೆ. ಆದರೆ ಒಬ್ಬ ಮನುಷ್ಯನಾಗಿ ಅವರ ವರ್ತನೆ ಸರಿಯಿಲ್ಲ ಎಂಬ ಕ್ಯಾತೆಯನ್ನೂ ತೆಗೆದಿದ್ದಾರೆ.
ಈ ಬಗ್ಗೆ ಪಾಕಿಸ್ತಾನದ ಜನಪ್ರಿಯ ನಿರೂಪಕಿ ಝೈನಬ್ ಅಬ್ಬಾಸ್ ಜೊತೆಗಿನ ಇನ್‌ಸ್ಟಾಗ್ರಾಮ್ ಸಂದರ್ಶನದಲ್ಲಿ ಮಾತನಾಡಿರುವ ಅಫ್ರಿದಿ, ಹಲವು ಸಂದರ್ಭಗಳಲ್ಲಿ ಗಂಭೀರ್ ಅವರಲ್ಲಿ ಏನೋ ಸಮಸ್ಯೆ ಇದೆ ಎಂಬುದರ ಬಗ್ಗೆ ತಮಗೆ ಅರಿವಾಗಿದೆ ಎಂದು ಹೇಳಿಕೊಂಡಿದ್ದಾರೆ.
"ಒಬ್ಬ ಕ್ರಿಕೆಟರ್ ಮತ್ತು ಒಬ್ಬ ಬ್ಯಾಟ್ಸ್‌ಮನ್ ಆಗಿ ನಾನು ಗಂಭೀರ್ ಅವರನ್ನು ಇಷ್ಟ ಪಟ್ಟಿದ್ದೇನೆ. ಆದರೆ, ಒಬ್ಬ ಮನುಷ್ಯನಾಗಿ ಅವರು ಕೆಲ ಬಾರಿ ಆಡುವಂತಹ ಮಾತುಗಳು ಮತ್ತು ಅವರ ನಡವಳಿಕೆ ಕಂಡರೆ ಅವರಲ್ಲಿ ಏನೋ ಸಮಸ್ಯೆ ಇದೆ ಎಂದು ಭಾವಿಸಿ ನಿರ್ಲಕ್ಷಿಸುವುದು ಒಳಿತು ಎನಿಸುತ್ತದೆ. ಅವರ ಮಾನಸಿಕ ಸ್ಥಿತಿ ಸರಿಯಿಲ್ಲ ಎಂಬುದು ಹಲವು ಬಾರಿ ಗೊತ್ತಾಗಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


