ಐಸಿಸಿ ಟಿ20 ವಿಶ್ವಕಪ್ ಮುಂದೂಡಿಕೆ ಅಧಿಕೃತ ಘೋಷಣೆ: ಐಪಿಎಲ್ ಗೆ ಹಾದಿ ಸುಗಮ
ಆಸ್ಟ್ರೇಲಿಯಾದ ಆತಿಥ್ಯದಲ್ಲಿ ಈ ವರ್ಷಾಂತ್ಯದಲ್ಲಿ ನಿಗದಿಯಾಗಿದ್ದ 2020ರ ಐಸಿಸಿ ಪುರುಷರ ಟಿ20 ವಿಶ್ವ ಕಪ್ ಮುಂದೂಡಿಕೆಯಾಗಿದೆ.

ನವದೆಹಲಿ: ಆಸ್ಟ್ರೇಲಿಯಾದ ಆತಿಥ್ಯದಲ್ಲಿ ಈ ವರ್ಷಾಂತ್ಯದಲ್ಲಿ ನಿಗದಿಯಾಗಿದ್ದ 2020ರ ಐಸಿಸಿ ಪುರುಷರ ಟಿ20 ವಿಶ್ವ ಕಪ್ ಮುಂದೂಡಿಕೆಯಾಗಿದೆ.
ಸೋಮವಾರ ನಡೆದ ಐಸಿಸಿ ಮಂಡಳಿ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಂಡ ಬಳಿಕ ಈ ನಿರ್ಧಾರ ಪ್ರಕಟಿಸಲಾಗಿದೆ. ಇದರೊಂದಿಗೆ ಇದೇ ಅವಧಿಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯನ್ನು ಆಯೋಜಿಸಲು ಬಿಸಿಸಿಐಗೆ ರಹದಾರಿ ಸಿಕ್ಕಾಂತಾಗಿದೆ.
ಪ್ರಸ್ತುತ ಉಲ್ಬಣಗೊಂಡಿರುವ ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಆಸ್ಟ್ರೇಲಿಯಾ ಆತಿಥ್ಯದಲ್ಲಿ 2020 ರಲ್ಲಿ ನಡೆಯಬೇಕಿದ್ದ ಐಸಿಸಿ ಪುರುಷರ ಟಿ 20 ವಿಶ್ವಕಪ್ ಅನ್ನು ಮುಂದೂಡಲಾಗಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಇಂದು ದೃಢಪಡಿಸಿದೆ ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಕೊರೊನಾ ವೈರಸ್‌ನಿಂದ ಎದುರಾಗಿರುವ ಸ್ಥಿತಿಗಳನ್ನು ಮನಗಂಡು ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಗಳನ್ನು 2021 ಮತ್ತು 2022ರಲ್ಲಿ ಆಯೋಜಿಸಲು ಐಸಿಸಿ ಮುಂದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


