ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಯಿಂದ ಕೆಳಗಿಳಿದ ಬಗ್ಗೆ ತುಟಿ ಬಿಚ್ಚಿದ ಕುಂಬ್ಳೆ!
ಟೀಂ ಇಂಡಿಯಾದ ಯಶಸ್ವಿ ಕೋಚ್ ಆಗಿದ್ದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಕನ್ನಡಿಗ ಅನಿಲ್ ಕುಂಬ್ಳೆ ಅವರು ಮುಖ್ಯ ಕೋಚ್ ಹುದ್ದೆಯಿಂದ ಕೆಳಗೆ ಇಳಿಯಬೇಕಾಯಿತು.

ನವದೆಹಲಿ: ಟೀಂ ಇಂಡಿಯಾದ ಯಶಸ್ವಿ ಕೋಚ್ ಆಗಿದ್ದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಕನ್ನಡಿಗ ಅನಿಲ್ ಕುಂಬ್ಳೆ ಅವರು ಮುಖ್ಯ ಕೋಚ್ ಹುದ್ದೆಯಿಂದ ಕೆಳಗೆ ಇಳಿಯಬೇಕಾಯಿತು.
ಭಾರತೀಯ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರಾಗಿದ್ದ ಸಮಯದ ಬಗ್ಗೆ ವಿಷಾದವಿಲ್ಲ ಆದರೆ ಅಧಿಕಾರಾವಧಿಯ ಅಂತ್ಯವು ಉತ್ತಮವಾಗಿರಬೇಕೆಂದು ಭಾವಿಸುವುದು ಸಹಜ ಎಂದು ಹೇಳಿದ್ದಾರೆ.
ನಾಯಕ ವಿರಾಟ್ ಕೊಹ್ಲಿ ಅವರೊಂದಿಗಿನ ಬಿರುಕಿನ ನಂತರ 2017ರ ಚಾಂಪಿಯನ್ಸ್ ಟ್ರೋಫಿ ಬಳಿಕ ಅನಿಲ್ ಕುಂಬ್ಳೆ ಸ್ಥಾನದಿಂದ ಕೆಳಗಿಳಿದರು.
"ಆ ಒಂದು ವರ್ಷದ ಅವಧಿಯಲ್ಲಿ ನಾವು ಉತ್ತಮವಾಗಿ ಕಾರ್ಯನಿರ್ವಹಿಸಿದ್ದೇನೆ. ಕೆಲವು ಕೊಡುಗೆಗಳನ್ನು ನೀಡಿದ್ದೇವೆ ಅದರ ಬಗ್ಗೆ ಹೆಮ್ಮೆ ಇದೆ. ಕೋಚ್ ಸ್ಥಾನದಿಂದ ಕೆಳಗಿಳಿದ ನಂತರವೂ ನಾನು ಸಂತೋಷದಿಂದ ಸಾಗುತ್ತಿದ್ದೇನೆ ಎಂದು ಮಾಜಿ ಸ್ಪಿನ್ನರ್ ಮಾಜಿ ಜಿಂಬಾಬ್ವೆಯ ಕ್ರಿಕೆಟಿಗ ಪೊಮ್ಮಿ ಎಂಬಂಗ್ವಾ ಅವರಿಗೆ ತಿಳಿಸಿದರು.
"ಅಂತ್ಯವು ಉತ್ತಮವಾಗಿರಬೇಕೆಂದು ಬಾವಿಸುವುದು ಸಹಜ. ಆದರೆ ನನಗಾದಿದ್ದರ ಬಗ್ಗೆ ಯಾವುದೇ ವಿಷಧವಿಲ್ಲ. ಆ ಒಂದು ವರ್ಷದಲ್ಲಿ ನಾನು ಮಹತ್ವದ ಪಾತ್ರ ವಹಿಸಿದ್ದೇನೆ ಎಂಬುದರ ಬಗ್ಗೆ ನನಗೆ ತುಂಬಾ ಸಂತೋಷವಿದೆ ಎಂದರು.
ಕುಂಬ್ಳೆ ಅವರು 2017ರಲ್ಲಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ಗೆ ತಲುಪಿದ ತಂಡದೊಂದಿಗೆ ಭಾರತದ ತರಬೇತುದಾರರಾಗಿ ಒಂದು ವರ್ಷದ ಯಶಸ್ವಿ ಅವಧಿಯನ್ನು ಹೊಂದಿದ್ದರು ಮತ್ತು ಪ್ರಬಲ ಟೆಸ್ಟ್ ತಂಡವಾಗಿದ್ದರು, ಅವರ ಅಧಿಕಾರಾವಧಿಯಲ್ಲಿ 17 ಟೆಸ್ಟ್‌ಗಳಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಸೋತಿದ್ದರು.
ಟೀಂ ಇಂಡಿಯಾ ಪರ 132 ಟೆಸ್ಟ್ ಪಂದ್ಯಗಳಲ್ಲಿ 619 ವಿಕೆಟ್ ಮತ್ತು 271 ಏಕದಿನ ಪಂದ್ಯಗಳಲ್ಲಿ 337 ವಿಕೆಟ್ ಗಳನ್ನು ಅನಿಲ್ ಕುಂಬ್ಳೆ ಪಡೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


