ಐಪಿಎಲ್ ಪಂದ್ಯಾವಳಿ ಸೆಪ್ಟೆಂಬರ್ 19 ರಿಂದ ನವಂಬರ್ 8 ರವರೆಗೆ: ಬಿಸಿಸಿಐ ಮೂಲಗಳು
ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ಗೆ ಕೊನೆಗೂ ದಿನಾಂಕ ನಿಗದಿಯಾದಂತೆ ಕಾಣುತ್ತಿದೆ. ಸೆಪ್ಟೆಂಬರ್ 19ರಂದು ಆರಂಭವಾಗಿ ನವೆಂಬರ್ 8ರಂದು ಮುಕ್ತಾಯಗೊಳ್ಳಲಿದೆ ಎಂದು ಬಿಸಿಸಿಐಯ ಖಚಿತ ಮೂಲಗಳು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿವೆ.

ನವದೆಹಲಿ: ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ಗೆ ಕೊನೆಗೂ ದಿನಾಂಕ ನಿಗದಿಯಾದಂತೆ ಕಾಣುತ್ತಿದೆ. ಸೆಪ್ಟೆಂಬರ್ 19ರಂದು ಆರಂಭವಾಗಿ ನವೆಂಬರ್ 8ರಂದು ಮುಕ್ತಾಯಗೊಳ್ಳಲಿದೆ ಎಂದು ಬಿಸಿಸಿಐಯ ಖಚಿತ ಮೂಲಗಳು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿವೆ.
ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಾವಳಿ ಆಯೋಜನೆಗೆ ರೂಪುರೇಷೆಗಳನ್ನು ಸಿದ್ದಪಡಿಸಲು ಐಪಿಎಲ್ ಆಡಳಿತ ಮಂಡಳಿ ಮುಂದಿನ ವಾರ ಸಭೆ ಸೇರಲಿದ್ದು ಅಲ್ಲಿ ನಿಗದಿತ ವೇಳಾಪಟ್ಟಿಗೆ ಒಪ್ಪಿಗೆ ಸೂಚಿಸಲಿದೆ. ಈ ಬಗ್ಗೆ ಬಿಸಿಸಿಐ ಅನೌಪಚಾರಿಕವಾಗಿ ಈಗಾಗಲೇ ಫ್ರೆಂಚೈಸಿಗಳಿಗೆ ತಿಳಿಸಿದೆ ಎನ್ನಲಾಗುತ್ತಿದೆ.
ಐಪಿಎಲ್ ಸೆಪ್ಟೆಂಬರ್ 19ರಂದು ಭಾನುವಾರ ಆರಂಭವಾಗಿ ಅಂತಿಮ ಪಂದ್ಯ ನವೆಂಬರ್ 8ರಂದು ಭಾನುವಾರ ಮುಕ್ತಾಯಗೊಳ್ಳಲಿದೆ. ಇದು 51 ದಿನಗಳ ಪಂದ್ಯಾವಳಿಯಾಗಿದ್ದು ಫ್ರಾಂಚೈಸಿಗಳು, ಪ್ರಚಾರಕರು ಮತ್ತು ಇತರ ಸಂಬಂಧಪಟ್ಟವರಿಗೆ ಹೊಂದಿಕೆಯಾಗಬಹುದು ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಐಪಿಎಲ್ ಪಂದ್ಯದ ವೇಳಾಪಟ್ಟಿ ನಿಗದಿಯಾಗಿದೆ ಎಂದು ಐಪಿಎಲ್ ಅಧ್ಯಕ್ಷ ಬ್ರಿಜೇಶ್ ಪಟೇಲ್ ಕೂಡ ಖಚಿತಪಡಿಸಿದ್ದಾರೆ.
ಕೋವಿಡ್-19 ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದಲ್ಲಿ ಅಕ್ಟೋಬರ್ ನಿಂದ ನವೆಂಬರ್ ವರೆಗೆ ನಡೆಯಲಿದ್ದ ಟಿ20 ವಿಶ್ವಕಪ್ ನ್ನು ಮುಂದೂಡಿ ಐಸಿಸಿ ನಿರ್ಧಾರ ಮಾಡಿರುವ ಹಿನ್ನೆಲೆಯಲ್ಲಿ ಐಪಿಎಲ್ ನ್ನು ಆಯೋಜಿಸಲಾಗುತ್ತಿದೆ.
ಐಪಿಎಲ್ ನಲ್ಲಿ ಪ್ರತಿ ತಂಡಕ್ಕೆ ತರಬೇತಿ, ಸಿದ್ದತೆ ಮಾಡಿಕೊಳ್ಳಲು ಕನಿಷ್ಠ ಒಂದು ತಿಂಗಳು ಸಮಯ ಬೇಕಾಗಿರುವುದರಿಂದ ಆಗಸ್ಟ್ 20ಕ್ಕೆ ತಂಡಗಳು ಯುಎಇಗೆ ಪ್ರಯಾಣ ಬೆಳೆಸಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


