ಕ್ರಿಕೆಟ್

ಐಪಿಎಲ್ ಆತಿಥ್ಯ ವಹಿಸಲು ಬಿಸಿಸಿಐನಿಂದ ಅಧಿಕೃತ ಪತ್ರ ಸ್ವೀಕರಿಸಿದ ಯುಎಇ

ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ), ಐಪಿಎಲ್ 2020 ಅನ್ನು ಆಯೋಜಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯಿಂದ(ಬಿಸಿಸಿಐ) ಅಧಿಕೃತ ಒಪ್ಪಂದವನ್ನು ಸ್ವೀಕರಿಸಿದೆ.

ಐಪಿಎಲ್ ಆತಿಥ್ಯ ವಹಿಸಲು ಬಿಸಿಸಿಐನಿಂದ ಅಧಿಕೃತ ಪತ್ರ ಸ್ವೀಕರಿಸಿದ ಯುಎಇ
ಐಪಿಎಲ್ ಟ್ರೋಫಿ
Published On :

ನವದೆಹಲಿ: ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ), ಐಪಿಎಲ್ 2020 ಅನ್ನು ಆಯೋಜಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯಿಂದ(ಬಿಸಿಸಿಐ) ಅಧಿಕೃತ ಒಪ್ಪಂದವನ್ನು ಸ್ವೀಕರಿಸಿದೆ. ಐಪಿಎಲ್‌ನ 13ನೇ ಆವೃತ್ತಿಯನ್ನು ಯುಎಇಯಲ್ಲಿ ಸೆಪ್ಟೆಂಬರ್ 19 ರಿಂದ ನವೆಂಬರ್ 10 ರವರೆಗೆ ನಡೆಸಲು ಉದ್ದೇಶಿಸಲಾಗಿದೆ. ಆದರೆ ಇದಕ್ಕೆ ಭಾರತ ಸರ್ಕಾರದ ಅನುಮೋದನೆ ಅಗತ್ಯವಿದೆ.

ಎಮಿರೇಟ್ಸ್ ಕ್ರಿಕೆಟ್ ಮಂಡಳಿ(ಇಸಿಬಿ) ಬಿಸಿಸಿಐನಿಂದ ಅಧಿಕೃತ ಪತ್ರವನ್ನು ಸ್ವೀಕರಿಸಿರುವುದನ್ನು ಸೋಮವಾರ ದೃಢಪಡಿಸಿದೆ. ಇಸಿಬಿ ಪ್ರಧಾನ ಕಾರ್ಯದರ್ಶಿ ಮುಬಾಶ್ಶೀರ್ ಉಸ್ಮಾನಿ ಅವರು ಈ ವಿಷಯ ತಿಳಿಸಿದ್ದಾರೆ. 

"ನಾವು ಬಿಸಿಸಿಐನಿಂದ ಅಧಿಕೃತ ಪತ್ರವನ್ನು ಸ್ವೀಕರಿಸಿದ್ದೇವೆ ಮತ್ತು ಒಪ್ಪಂದವನ್ನು ಅಂತಿಮಗೊಳಿಸುವ ಸಂಬಂಧ ಭಾರತ ಸರ್ಕಾರದ ನಿರ್ಧಾರಕ್ಕಾಗಿ ನಾವು ಈಗ ಕಾಯುತ್ತಿದ್ದೇವೆ" ಎಂದು ಹೇಳಿದ್ದಾರೆ.

ಐಪಿಎಲ್ ಸುರಕ್ಷಿತ ಮತ್ತು ಯಶಸ್ವಿಯಾಗಿ ನಡೆಸಲು ಖಚಿತಪಡಿಸಿಕೊಳ್ಳಲು ಇಸಿಬಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಹೆಚ್ಚಿನ ಚರ್ಚೆ ಮತ್ತು ಕ್ರಮಗಳನ್ನು ಪ್ರಾರಂಭಿಸಿದೆ. ವಿಶ್ವದ ಅತ್ಯಂತ ಜನಪ್ರಿಯ ಪಂದ್ಯಾವಳಿಯನ್ನು ಆಯೋಜಿಸಲು ಸಾಕಷ್ಟು ಕೆಲಸ ಮಾಡಬೇಕಾಗಿದೆ ಎಂದು ಉಸ್ಮಾನಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.