ಕೊರೋನಾ ಕಾಲದ 3 ಪಂದ್ಯಗಳ ಟೆಸ್ಟ್ ಸರಣಿ ಆಂಗ್ಲರ ಮಡಿಲಿಗೆ
ಕ್ರಿಸ್ ವೋಕ್ಸ್ (50ಕ್ಕೆ 5) ಮತ್ತು ಸ್ಟುವರ್ಟ್ ಬ್ರಾಡ್ (36ಕ್ಕೆ 4) ಅವರ ಅತ್ಯಮೋಘ ಬೌಲಿಂಗ್ ಪ್ರದರ್ಶನದ ನೆರವಿನಿಂದ ಇಂಗ್ಲೆಂಡ್ ತಂಡ ಮೂರನೇ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 269 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಮ್ಯಾಂಚೆಸ್ಟರ್: ಕ್ರಿಸ್ ವೋಕ್ಸ್ (50ಕ್ಕೆ 5) ಮತ್ತು ಸ್ಟುವರ್ಟ್ ಬ್ರಾಡ್ (36ಕ್ಕೆ 4) ಅವರ ಅತ್ಯಮೋಘ ಬೌಲಿಂಗ್ ಪ್ರದರ್ಶನದ ನೆರವಿನಿಂದ ಇಂಗ್ಲೆಂಡ್ ತಂಡ ಮೂರನೇ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 269 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಇದರೊಂದಿಗೆ ಸುಮಾರು ನಾಲ್ಕು ತಿಂಗಳ ನಂತರ ಪುನರಾರಂಭಗೊಂಡ ಕೊರೊನಾ ಕಾಲದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು 2-1ರಲ್ಲಿ ವಶಪಡಿಸಿಕೊಂಡ ಇಂಗ್ಲೆಂಡ್ ತಂಡ, ಹೊಸ ಮನ್ವಂತರಕ್ಕೆ ಸಾಕ್ಷಿಯಾಗಿದೆ.
ಇಲ್ಲಿನ ಎಮಿರೇಟ್ಸ್ ಓಲ್ಡ್ ಟ್ರಾಫೋರ್ಡ್ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡ ಪಂದ್ಯದ ಐದನೇ ದಿನವಾದ ಮಂಗಳವಾರ 399 ರನ್ ಗಳ ಕಠಿಣ ಗುರಿ ಬೆನ್ನಟ್ಟಿದ್ದ ಕೆರಿಬಿಯನ್ ಬಳಗ, 37.1 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ನಷ್ಟಕ್ಕೆ ಕೇವಲ 129 ರನ್ ಗಳಿಸಲಷ್ಟೇ ಶಕ್ತಗೊಂಡಿತು. ಹೀಗಾಗಿ ವಿಸ್ಡನ್ ಟ್ರೋಫಿ ಉಳಿಸಿಕೊಳ್ಳುವ ಜೇಸನ್ ಹೋಲ್ಡರ್ ಬಳಗದ ಕನಸು ಭಗ್ನಗೊಂಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


