ಎಂಎಸ್ ಧೋನಿ ಸ್ಥಾನ ತುಂಬಬಲ್ಲ ಟೀಂ ಇಂಡಿಯಾ ಆಟಗಾರನ ಹೆಸರಿಸಿದ ಸುರೇಶ್ ರೈನಾ!
ಟೀಂ ಇಂಡಿಯಾ ಯಶಸ್ವಿ ನಾಯಕ ಎಂಎಸ್ ಧೋನಿ ಸ್ಥಾನ ತುಂಬಬಲ್ಲ ಆಟಗಾರನನ್ನು ಸುರೇಶ್ ರೈನಾ ಹೆಸರಿಸಿದ್ದಾರೆ.

ನವದೆಹಲಿ: ಟೀಂ ಇಂಡಿಯಾ ಯಶಸ್ವಿ ನಾಯಕ ಎಂಎಸ್ ಧೋನಿ ಸ್ಥಾನ ತುಂಬಬಲ್ಲ ಆಟಗಾರನನ್ನು ಸುರೇಶ್ ರೈನಾ ಹೆಸರಿಸಿದ್ದಾರೆ.
ಪ್ರಸ್ತುತ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ವಿರಾಟ್ ಕೊಹ್ಲಿಯ ಹೆಸರನ್ನು ಸೂಚಿಸದ ಸುರೇಶ್ ರೈನಾ ಅವರು ಎಲ್ಲಾ ಆಟಗಾರರನ್ನು ನಾಯಕನಂತೆ ಕಾಣುವ ರೋಹಿತ್ ಶರ್ಮಾ ಎಂಎಸ್ ಧೋನಿ ಸ್ಥಾನವನ್ನು ತುಂಬಬಲ್ಲ ಸಾಮರ್ಥ್ಯ ಹೊಂದಿದ್ದಾರೆ ಎಂದರು.
ತಂಡವನ್ನು ಮುನ್ನಡೆಸುವ ನಾಯಕತ್ವದ ಗುಣ ಹಾಗೂ ಡ್ರೆಸ್ಸಿಂಗ್ ರೂಂನಲ್ಲಿ ಇತರ ಆಟಗಾರರ ಮೇಲೆ ಬೀರುವ ಪ್ರಭಾವದ ಕಾರಣದಿಂದಾಗಿ ರೋಹಿತ್ ಶರ್ಮಾ ಮುಂದಿನ ಎಂಎಸ್ ಧೋನಿ ಎಂದು ಸುರೇಶ್ ರೈನಾ ಹೇಳಿದ್ದಾರೆ.
ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಹಲವು ಬಾರಿ ಚಾಂಪಿಯನ್ ಮಾಡುವ ಮೂಲಕ ರೋಹಿತ್ ಶರ್ಮಾ ತಮ್ಮ ನಾಯಕತ್ವ ಗುಣವನ್ನು ಸಾಬೀತುಪಡಿಸಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


