ಮತ್ತೊಬ್ಬ ಗವಾಸ್ಕರ್-ತೆಂಡೂಲ್ಕರ್ ರೂಪಿಸುವುದು ಅಸಾಧ್ಯ: ಪಾಕ್ ಮಾಜಿ ಕ್ರಿಕೆಟಿಗ ಮಿಯಾಂದಾದ್
ಭಾರತೀಯ ಕ್ರಿಕೆಟ್ ಕಂಡ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಸುನೀಲ್ ಗವಾಸ್ಕರ್ ಕೂಡ ಒಬ್ಬರು. ಅವರು 1987ರಲ್ಲಿ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳುತ್ತಿದ್ದಂತೆ ಭಾರತೀಯ ಅಭಿಮಾನಿಗಳು ಒಬ್ಬ ಅದ್ಭುತ ಆಟಗಾರನನ್ನು ಕಳೆದುಕೊಳ್ಳುತ್ತಿದ್ದೇವೆಂದು ಕಣ್ಣೀರು ಹಾಕಿದ್ದರು.

ನವದೆಹಲಿ: ಭಾರತೀಯ ಕ್ರಿಕೆಟ್ ಕಂಡ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಸುನೀಲ್ ಗವಾಸ್ಕರ್ ಕೂಡ ಒಬ್ಬರು. ಅವರು 1987ರಲ್ಲಿ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳುತ್ತಿದ್ದಂತೆ ಭಾರತೀಯ ಅಭಿಮಾನಿಗಳು ಒಬ್ಬ ಅದ್ಭುತ ಆಟಗಾರನನ್ನು ಕಳೆದುಕೊಳ್ಳುತ್ತಿದ್ದೇವೆಂದು ಕಣ್ಣೀರು ಹಾಕಿದ್ದರು. ಭಾರತ ತಂಡದಲ್ಲಿ ಗವಾಸ್ಕರ್ ಇಲ್ಲ ಎಂಬ ನೋವು ಕೆಲವು ವರ್ಷಗಳ ಕಾಲ ಅಭಿಮಾನಿಗಳಲ್ಲಿ ಇತ್ತು.
16ನೇ ವಯಸ್ಸಿನಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಟೀಮ್ ಇಂಡಿಯಾಗೆ ಆಗಮಿಸುವವರೆಗೂ ಗವಾಸ್ಕರ್ ಇಲ್ಲದ ಕೊರಗು ತಂಡದಲ್ಲಿತ್ತು. 1989ರಲ್ಲಿ ಭಾರತದ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಸಚಿನ್ ತೆಂಡೂಲ್ಕರ್ ಪದಾರ್ಪಣೆ ಮಾಡಿದರು. ನಂತರ, 90 ದಶಕದ ಆರಂಭದಲ್ಲಿ ಸಚಿನ್, ಹಂತ-ಹಂತವಾಗಿ ತಂಡದಲ್ಲಿ ಗುರುತಿಸಿಕೊಂಡರು.
ತಮ್ಮ ವಿಶಿಷ್ಠ ಶೈಲಿಯ ಬ್ಯಾಟಿಂಗ್ ಮೂಲಕ ಎಲ್ಲರ ಚಿತ್ತ ಕದ್ದ ಕ್ರಿಕೆಟ್ ದೇವರು, ಇಡೀ ವಿಶ್ವದಲ್ಲಿಯೇ ಅಭಿಮಾನಿಗಳನ್ನು ಸಂಪಾದಿಸಿದರು. ಬಳಿಕ 2000 ಇಸವಿಯ ಹೊತ್ತಿಗೆ ವಿಶ್ವ ಕ್ರಿಕೆಟ್ ಅನ್ನು ಆಳಿದರು. ಎರಡು ದಶಕಕ್ಕೂ ಹೆಚ್ಚು ಅವಧಿಯಲ್ಲಿ ಹಲವಾರು ದಾಖಲೆಗಳನ್ನು ಮಾಡಿದ ಸಚಿನ್, 2013ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


