ಸದ್ಯದ ಟೀಂ ಇಂಡಿಯಾ ದೊಡ್ಡ ಪಂದ್ಯಗಳ ಒತ್ತಡವನ್ನು ಮೆಟ್ಟಿ ನಿಲ್ಲುವಲ್ಲಿ ವಿಫಲ: ಗೌತಮ್ ಗಂಭೀರ್
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಆಯೋಜಿತ ದೊಡ್ಡ ಪಂದ್ಯಗಳಲ್ಲಿ ಟೀಂ ಇಂಡಿಯಾ ಒತ್ತಡವನ್ನು ಮೆಟ್ಟಿನಿಲ್ಲುವಲ್ಲಿ ವಿಫಲವಾಗುತ್ತಿದೆ ಮತ್ತು ಅದಕ್ಕಾಗಿಯೇ ಇದು ಅನೇಕ ನಿರ್ಣಾಯಕ ಪಂದ್ಯಗಳನ್ನು ಕಳೆದುಕೊಂಡಿದೆ ಎಂದು ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಆಯೋಜಿತ ದೊಡ್ಡ ಪಂದ್ಯಗಳಲ್ಲಿ ಟೀಂ ಇಂಡಿಯಾ ಒತ್ತಡವನ್ನು ಮೆಟ್ಟಿನಿಲ್ಲುವಲ್ಲಿ ವಿಫಲವಾಗುತ್ತಿದೆ ಮತ್ತು ಅದಕ್ಕಾಗಿಯೇ ಇದು ಅನೇಕ ನಿರ್ಣಾಯಕ ಪಂದ್ಯಗಳನ್ನು ಕಳೆದುಕೊಂಡಿದೆ ಎಂದು ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.
ಕ್ರಿಕೆಟ್ ಕನೆಕ್ಟೆಡ್ ಎಂಬ ಸ್ಟಾರ್ ಸ್ಪೋರ್ಟ್ಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಗಂಭೀರ್, ನನ್ನ ದೃಷ್ಟಿಯಲ್ಲಿ, ಈ ಪಂದ್ಯಗಳಲ್ಲಿನ ಒತ್ತಡವನ್ನು ತಡೆದುಕೊಳ್ಳಲು ಭಾರತೀಯ ತಂಡಕ್ಕೆ ಸಾಧ್ಯವಿಲ್ಲ. ಆದರೆ ಇತರ ತಂಡಗಳು ಒತ್ತಡ ಮೆಟ್ಟಿನಿಲ್ಲುವಲ್ಲಿ ಸಫಲವಾಗುತ್ತಿದೆ ಎಂದಿದ್ದಾರೆ.
ನೀವು ಎಲ್ಲಾ ಸೆಮಿಫೈನಲ್ ಮತ್ತು ಫೈನಲ್‌ಗಳನ್ನು ನೋಡಿದರೆ, ಲೀಗ್ ಹಂತದಲ್ಲಿ ನಿಜವಾಗಿಯೂ ಉತ್ತಮವಾಗಿ ಆಡುವ ತಂಡ ಸೆಮಿಫೈನಲ್ ಅಥವಾ ನಾಕೌಟ್‌ಗಳಲ್ಲಿ ಉತ್ತಮವಾಗಿ ಆಡುವುದಿಲ್ಲ ಇದು ಪ್ರಸ್ತುತ ತಂಡ ಮಾನಸಿಕ ಸ್ಥಿರತೆ ಇಲ್ಲದಿರುವುದನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.
28 ವರ್ಷಗಳ ನಂತರ ದೇಶ ಗೆದ್ದ 2011 ರ ವಿಶ್ವಕಪ್‌ನ ಭಾಗವಾಗಿದ್ದ ಗಂಭೀರ್ ಅವರು ತಮ್ಮನ್ನು ತಾವು ಸಾಬೀತುಪಡಿಸದ ಹೊರತು ಭಾರತವನ್ನು ವಿಶ್ವ ಚಾಂಪಿಯನ್ ಎಂದು ಕರೆಯಲು ಸಾಧ್ಯವಿಲ್ಲ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


