ಮೈದಾನಕ್ಕಿಳಿದರೆ ಜಸ್ ಪ್ರೀತ್ ಬುಮ್ರಾರಿಂದ ಮೃಗೀಯ ಆಟ ಪ್ರದರ್ಶನ: ಜಯವರ್ಧನೆ
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅತಿ ಹೆಚ್ಚು ಬಾರಿ ಪ್ರಶಸ್ತಿ ಗೆದ್ದ ತಂಡವಾಗಿರುವ ಮುಂಬೈ ಇಂಡಿಯನ್ಸ್ ಯಶಸ್ಸಿಗೆ ಜಸ್‌ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಅವರಂತಹ ಸ್ಟಾರ್ ಆಟಗಾರರ ಕೊಡುಗೆಯೇ ಕಾರಣ ಎಂದರೆ ತಪ್ಪಾಗಲಾರದು.

ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅತಿ ಹೆಚ್ಚು ಬಾರಿ ಪ್ರಶಸ್ತಿ ಗೆದ್ದ ತಂಡವಾಗಿರುವ ಮುಂಬೈ ಇಂಡಿಯನ್ಸ್ ಯಶಸ್ಸಿಗೆ ಜಸ್‌ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಅವರಂತಹ ಸ್ಟಾರ್ ಆಟಗಾರರ ಕೊಡುಗೆಯೇ ಕಾರಣ ಎಂದರೆ ತಪ್ಪಾಗಲಾರದು.
ಗುಜರಾತ್ ಮೂಲದ ಯುವ ವೇಗಿ ಜಸ್‌ಪ್ರೀತ್ ಬುಮ್ರಾ, 2013ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೇರಿಕೊಳ್ಳುವ ಮೂಲಕ ಅಂದಿನಿಂದ ಇಂದಿನವರೆಗೆ ತಮ್ಮ ಅದ್ಭುತ ಬೌಲಿಂಗ್‌ನೊಂದಿಗೆ ಹಲವು ಪಂದ್ಯಗಳನ್ನು ಗೆದ್ದುಕೊಡುವ ಮೂಲಕ ಮ್ಯಾಚ್ ವಿನ್ನರ್ ಆಗಿದ್ದಾರೆ. ಇನಿಂಗ್ಸ್ ಆರಂಭದಲ್ಲಿ ಹೊಸ ಚೆಂಡಿನೊಂದಿಗೆ ಮತ್ತು ಡೆತ್ ಓವರ್‌ಗಳಲ್ಲಿ ಡೆಡ್ಲಿ ಯಾರ್ಕರ್‌ಗಳ ಮೂಲಕ ಬ್ಯಾಟ್ಸ್‌ಮನ್‌ಗಳಿಗೆ ಬುಮ್ರಾ ಸಿಂಹ ಸ್ವಪ್ನವಾಗಿದ್ದಾರೆ.
ಇನ್ನು ಬರೋಡ ಮೂಲದ ಯುವ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ಅವಕಾಶ ಸಿಕ್ಕಾಗಲೆಲ್ಲಾ ತಮ್ಮ ಆಲ್‌ರೌಂಡ್ ಆಟದ ಮೂಲಕ ಎದುರಾಳಿ ತಂಡಗಳನ್ನು ಬೆಚ್ಚುವಂತೆ ಮಾಡಿದ್ದಾರೆ. ಈ ಇಬ್ಬರೂ ಆಟಗಾರರ ಬಗ್ಗೆ ಮಾತನಾಡಿರುವ ಮುಂಬೈ ಇಂಡಿಯನ್ಸ್ ತಂಡದ ಮುಖ್ಯ ಕೋಚ್ ಮಹೇಲಾ ಜಯವರ್ಧನೆ ಮೆಚ್ಚುಗೆಯ ಸುರಿಮಳೆಯನ್ನೇ ಸುರಿಸಿದ್ದಾರೆ.
"ಬುಮ್ಸ್ (ಜಸ್‌ಪ್ರೀತ್ ಬುಮ್ರಾ) ಬಹಳ ಶಾಂತ ವ್ಯಕ್ತಿ. ಆದರೆ, ಆಟವಾಡಲು ಆತ ಅಂಗಣಕ್ಕೆ ಇಳಿದರೆ ಪಶುವಂತೆ ಆಗಿಬಿಡುತ್ತಾರೆ. ಇನ್ನು ಹಾರ್ದಿಕ್ ಪಾಂಡ್ಯ ಆಫ್ ದಿ ಫೀಲ್ಡ್‌ನಲ್ಲಿ ಎಷ್ಟು ಅಬ್ಬರಿಸುತ್ತಾರೋ ಆನ್ ದಿ ಫೀಲ್ಡ್‌ನಲ್ಲೂ ಅಷ್ಟೇ ಘರ್ಜಿಸುತ್ತಾರೆ. ನಮ್ಮ ಡ್ರೆಸಿಂಗ್ ರೂಮ್‌ನಲ್ಲಿ ಅದ್ಭುತ ವಾತಾವರಣವಿದೆ. ಪ್ರತಿಭಾನ್ವಿತ ಆಟಗಾರರಿದ್ದಾರೆ. ಇಂತಹ ಸೊಗಸಾದ ಫ್ರಾಂಚೈಸಿ ತಂಡದ ಭಾಗವಾಗಿರುವುದು ಅತ್ಯಂತ ಪ್ರಿಯವಾದ ಸಂಗತಿ," ಎಂದು ಸೋನಿ ಟೆನ್ ಪಿಟ್‌ಸ್ಟಾಪ್ ಕಾರ್ಯಕ್ರಮದಲ್ಲಿ ಮಹೇಲಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


