ದ್ವಿತೀಯ ಟೆಸ್ಟ್ : ತಂಡದ ಬ್ಯಾಟಿಂಗ್ ವಿಫಲತೆ ಬಗ್ಗೆ ಬುಮ್ರಾ ಪ್ರತಿಕ್ರಿಯೆ ಹೀಗಿದೆ
ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಸೋಲಿನ ಭೀತಿಗೆ ಸಿಲುಕಿರುವ ಭಾರತ ತಂಡ ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದೆ. ಆದರೂ, ವೇಗಿ ಜಸ್ಪ್ರಿತ್ ಬುಮ್ರಾ ತಮ್ಮ ಬ್ಯಾಟಿಂಗ್ ವಿಭಾಗವನ್ನು ದೂರುವಲ್ಲಿ ನಿರಾಕರಿಸಿದ್ದಾರೆ.

ಕ್ರೈಸ್ಟ್‌ಚರ್ಚ್ : ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಸೋಲಿನ ಭೀತಿಗೆ ಸಿಲುಕಿರುವ ಭಾರತ ತಂಡ ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದೆ. ಆದರೂ, ವೇಗಿ ಜಸ್ಪ್ರಿತ್ ಬುಮ್ರಾ ತಮ್ಮ ಬ್ಯಾಟಿಂಗ್ ವಿಭಾಗವನ್ನು ದೂರುವಲ್ಲಿ ನಿರಾಕರಿಸಿದ್ದಾರೆ.
ಪ್ರಥಮ ಇನಿಂಗ್ಸ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು 235 ರನ್‌ಗಳಿಗೆ ಕಟ್ಟಿ ಹಾಕಿದ ಟೀಮ್ ಇಂಡಿಯಾ ಏಳು ರನ್‌ಗಳ ಮುನ್ನಡೆ ಗಳಿಸಿತ್ತು. ಬಳಿಕ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಎರಡನೇ ದಿನದಂತ್ಯಕ್ಕೆ ಕೇವಲ 90 ರನ್‌ಗಳಿಗೆ ಆರು ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
ನೋಡಿ ಇನ್ನೊಬ್ಬರನ್ನು ದೂರುವುದು ನಮ್ಮ ಸಂಸ್ಕೃತಿಯಲ್ಲ. ಕ್ರೀಡೆಯು ಹೇಗೆ ನಿರ್ವಹಿಸುತ್ತದೆ ಎಂಬುದು ತಿಳಿದಿದೆ. ಕೆಲವೊಂದು ಬಾರಿ ಹೀಗಾಗುತ್ತದೆ. ಒಂದು ವೇಳೆ ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನ ನೀಡಿ ಬೌಲರ್‌ಗಳು ವಿಫಲವಾದರೆ ದೂರುವ ಸ್ವಾತಂತ್ರ್ಯವಿರುವುದಿಲ್ಲ ಎಂದಿದ್ದಾರೆ.
ಹಾಗೆಯೇ ನಾವೊಂದು ತಂಡವಾಗಿ ಕಠಿಣ ಪ್ರಯತ್ನವನ್ನು ಮಾಡುತ್ತಿದ್ದೇವೆ. ನಿಜ, ನಾವು ಬಯಸಿದಕ್ಕಿಂತಲೂ ಹೆಚ್ಚಿನ ವಿಕೆಟ್‌ಗಳನ್ನು ಕಳೆದುಕೊಂಡಿದ್ದೇವೆ. ಆದರೆ ಒಂದು ತಂಡವಾಗಿ ಒಬ್ಬರನ್ನೊಬ್ಬರನ್ನು ದೂರಲು ಇಷ್ಟಪಡುವುದಿಲ್ಲ" ಎಂದು ಬುಮ್ರಾ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


