ಕ್ರಿಕೆಟ್

ಕಿವೀಸ್ ವಿರುದ್ಧ ಟೆಸ್ಟ್ ಸರಣಿ ಸೋಲು; ಕೊಹ್ಲಿಯನ್ನು ನಿಂದಿಸುವುದರಿಂದ ಪ್ರಯೋಜನವಿಲ್ಲ- ಇಂಜಮಾಮ್, ವಿಡಿಯೋ!

ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಮತ್ತು ಟೆಸ್ಟ್ ಸರಣಿಯ ಹೀನಾಯ ಸೋಲು ಟೀಂ ಇಂಡಿಯಾದ ಜಂಘಾಬಲವೇ ಕುಸಿಯುವಂತೆ ಮಾಡಿದೆ. ಇನ್ನು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿದ್ದು, ಕೊಹ್ಲಿಯನ್ನು ನಿಂದಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಪಾಕ್ ಮಾಜಿ ನಾಯಕ ಇಂಜಮಾಮ್-ಉಲ್-ಹಕ್ ಹೇಳಿದ್ದಾರೆ.

ಕಿವೀಸ್ ವಿರುದ್ಧ ಟೆಸ್ಟ್ ಸರಣಿ ಸೋಲು; ಕೊಹ್ಲಿಯನ್ನು ನಿಂದಿಸುವುದರಿಂದ ಪ್ರಯೋಜನವಿಲ್ಲ- ಇಂಜಮಾಮ್, ವಿಡಿಯೋ!
ಇಂಜಮಾಮ್ ಉಲ್ ಹಕ್-ಕೊಹ್ಲಿ
Published On :

ಲಾಹೋರ್: ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಮತ್ತು ಟೆಸ್ಟ್ ಸರಣಿಯ ಹೀನಾಯ ಸೋಲು ಟೀಂ ಇಂಡಿಯಾದ ಜಂಘಾಬಲವೇ ಕುಸಿಯುವಂತೆ ಮಾಡಿದೆ. ಇನ್ನು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿದ್ದು, ಕೊಹ್ಲಿಯನ್ನು ನಿಂದಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಪಾಕ್ ಮಾಜಿ ನಾಯಕ ಇಂಜಮಾಮ್-ಉಲ್-ಹಕ್ ಹೇಳಿದ್ದಾರೆ.

ಎರಡು ಟೆಸ್ಟ್ ಪಂದ್ಯದ ನಾಲ್ಕು ಇನ್ನಿಂಗ್ಸ್ ಗಳಲ್ಲಿ ವಿರಾಟ್ ಕೊಹ್ಲಿ ಕೇವಲ 38 ರನ್ ಮಾತ್ರ ಪೇರಿಸಿದ್ದಾರೆ. ಇನ್ನು ಸರಣಿಯಲ್ಲಿ ವೈಟ್ ವಾಶ್ ಮುಖಭಂಗವನ್ನು ಭಾರತ ಅನುಭವಿಸಿದೆ. ಈ ಮಧ್ಯೆ ಒತ್ತಡದಲ್ಲಿರುವ ಟೀಂ ಇಂಡಿಯಾ ನಾಯಕ ಕೊಹ್ಲಿ ಅವರನ್ನು ಪಾಕ್ ಮಾಜಿ ನಾಯಕ ಇಂಜಮಾಮ್-ಉಲ್-ಹಕ್ ಬೆಂಬಲಿಸಿದ್ದಾರೆ. 

ನ್ಯೂಜಿಲ್ಯಾಂಡ್ ವಿರುದ್ಧದ ಸೋಲಿನ ಕುರಿತು ಚಿಂತೆ ಮಾಡುವ ಅಗತ್ಯವಿಲ್ಲ. ವಿರಾಟ್ ಕೊಹ್ಲಿ ಮತ್ತಷ್ಟು ಬಲಶಾಲಿಯಾಗಿ ಕಮ್ ಬ್ಯಾಕ್ ಮಾಡುತ್ತಾರೆ. ಇನ್ನು ಇದು ಭಾರತ ತಂಡದ ಸೋಲು ಹೊರತು ವಿರಾಟ್ ಕೊಹ್ಲಿಯ ಸೋಲಲ್ಲ ಎಂದು ಹೇಳಿದ್ದಾರೆ. 

ನ್ಯೂಜಿಲ್ಯಾಂಡ್ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ 0-2 ಅಂತರದಿಂದ ಸೋಲು ಅನುಭವಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.