ಪ್ರತಿಭೆ ಗುರುತಿಸಲು ಮುಂದಿನ ವರ್ಷದಿಂದ ಮಹಿಳಾ ಐಪಿಎಲ್ ಆಯೋಜಿಸಿ: ಸುನಿಲ್ ಗವಾಸ್ಕರ್
ಪ್ರತಿಭಾವಂತ ಆಟಗಾರರನ್ನು ಗುರುತಿಸಲು ಮತ್ತು ಹೊಸ ಹೊಸ ಪ್ರತಿಭೆಗಳನ್ನು ಬೆಳಕಿಗೆ ತರುವ ನಿಟ್ಟಿನಲ್ಲಿ ಮುಂದಿನ ವರ್ಷದ ಪುರುಷರ ಐಪಿಎಲ್ ಮಾದರಿಯಲ್ಲಿಯೇ ಪೂರ್ಣ ಪ್ರಮಾಣದ ಮಹಿಳೆಯರ ಐಪಿಎಲ್ ಲೀಗ್ ಆಯೋಜಿಸಬೇಕು ಎಂದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್, ಬಿಸಿಸಿಐಗೆ ಸಲಹೆ ನೀಡಿದ್ದಾರೆ.

ಮೆಲ್ಬೋರ್ನ್: ಪ್ರತಿಭಾವಂತ ಆಟಗಾರರನ್ನು ಗುರುತಿಸಲು ಮತ್ತು ಹೊಸ ಹೊಸ ಪ್ರತಿಭೆಗಳನ್ನು ಬೆಳಕಿಗೆ ತರುವ ನಿಟ್ಟಿನಲ್ಲಿ ಮುಂದಿನ ವರ್ಷದ ಪುರುಷರ ಐಪಿಎಲ್ ಮಾದರಿಯಲ್ಲಿಯೇ ಪೂರ್ಣ ಪ್ರಮಾಣದ ಮಹಿಳೆಯರ ಐಪಿಎಲ್ ಲೀಗ್ ಆಯೋಜಿಸಬೇಕು ಎಂದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್, ಬಿಸಿಸಿಐಗೆ ಸಲಹೆ ನೀಡಿದ್ದಾರೆ.
ಮಹಿಳಾ ಟಿ-20 ವಿಶ್ವಕಪ್ ಫೈನಲ್ ನಲ್ಲಿ ಹರ್ಮನ್ ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ಸೋಲು ಅನುಭವಿಸಿದ ಬಳಿಕ ಸುನಿಲ್ ಗವಾಸ್ಕರ್ ಈ ಹೇಳಿಕೆ ನೀಡಿದ್ದು, ಅತ್ಯಂತ ಮಹತ್ವ ಪಡೆದುಕೊಂಡಿದೆ.
2021ರಿಂದ ಮಹಿಳಾ ಐಪಿಎಲ್ ಟೂರ್ನಿಯನ್ನೂ ಆಯೋಜಿಸಲು ಯೋಜನೆ ರೂಪಿಸುವಂತೆ ನಾನು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಮತ್ತು ಬಿಸಿಸಿಐಗೆ ಸಲಹೆ ನೀಡುತ್ತಿದ್ದೇನೆ. ಇದರಿಂದ ಹೆಚ್ಚಿನ ಪ್ರತಿಭಗಳನ್ನು ಗುರುತಿಸಲು ಸಹಾಯವಾಗುತ್ತದೆ ಎಂದು ಗವಾಸ್ಕರ್ ಹೇಳಿದ್ದಾರೆ.
ಭಾರತದ ಮಹಿಳಾ ಕ್ರಿಕೆಟ್‌ನಲ್ಲಿ ಈಗಾಗಲೇ ಅನೇಕ ಅಮೂಲ್ಯ ಆಟಗಾರ್ತಿಯರಿದ್ದಾರೆ. ಒಂದು ವೇಳೆ ಮಹಿಳೆಯರ ಐಪಿಎಲ್ ನಡೆಸಿದ್ದೇ ಆದ್ರೆ, ತಂಡಕ್ಕೆ ಮತ್ತಷ್ಟು ಸಹಾಯವಾಗಲಿದೆ. ಹೊಸ ಪ್ರತಿಭೆಗಳು ಬೆಳಕಿಗೆ ಬರುವ ಮೂಲಕ ಭವಿಷ್ಯದಲ್ಲಿ ದೊಡ್ಡ ಟೂರ್ನಿಗಳನ್ನ ಗೆಲ್ಲೋದಕ್ಕೆ ಸಹಕಾರಿಯಾಗಲಿದೆ ಎಂದು ಗವಾಸ್ಕರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


