ಸಚಿನ್ ತೆಂಡೂಲ್ಕರ್ ದಾಖಲೆ ಮುರಿಯುವ ಹೊಸ್ತಿಲಲ್ಲಿ ವಿರಾಟ್ ಕೊಹ್ಲಿ
ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ದಾಖಲೆ ಮುರಿಯುವ ಹೊಸ್ತಿಲಲ್ಲಿದ್ದಾರೆ.

ಧರ್ಮಶಾಲಾ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ದಾಖಲೆ ಮುರಿಯುವ ಹೊಸ್ತಿಲಲ್ಲಿದ್ದಾರೆ.
ಹೌದು. ಧರ್ಮಶಾಲಾದಲ್ಲಿ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಒಂದು ವೇಳೆ ಕೊಹ್ಲಿ 133 ರನ್ ಗಳಿಸಿದರೆ ಅತಿ ವೇಗದಲ್ಲಿ 12 ಸಾವಿರ ರನ್ ಪೂರೈಸಿದ ಸಚಿನ್ ಅವರ ದಾಖಲೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ.
ಸದ್ಯ ಕೊಹ್ಲಿ 239 ಇನಿಂಗ್ಸ್ ಗಳಲ್ಲಿ 11 ಸಾವಿರದ 867 ರನ್ ಗಳಿಸಿದ್ದಾರೆ. ಕ್ರಿಕೆಟ್ ದಿಗ್ಗಜ ಸಚಿನ್ 300 ಇನಿಂಗ್ಸ್ ಗಳಲ್ಲಿ 12 ಸಾವಿರ ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟ್ಸಮನ್ ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ಒಂದು ವೇಳೆ ಕೊಹ್ಲಿ ದಾಖಲೆ ಮುರಿದ್ದಲ್ಲಿ ಅತಿ ವೇಗವಾಗಿ ಈ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರ ಎನಿಸಲಿದ್ದಾರೆ.
ಅಷ್ಟೇ ಯಾಕೆ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ವೇಗದಲ್ಲಿ 12000 ರನ್ ಗಳಿಸಿದ ದಾಖಲೆಗೂ ಭಾಜನವಾಗಲಿದ್ದಾರೆ. ವಿರಾಟ್ ಕೊಹ್ಲಿ ಇದುವರೆಗೆ ಆಡಿರುವ 239 ಇನ್ನಿಂಗ್ಸ್‌ಗಳಲ್ಲಿ (248 ಇನ್ನಿಂಗ್ಸ್) 59.33ರ ಸರಾಸರಿಯಲ್ಲಿ 11867 ರನ್ ಪೇರಿಸಿದ್ದಾರೆ. ಇದರಲ್ಲಿ 43 ಶತಕ ಹಾಗೂ 58 ಅರ್ಧಶತಕಗಳು ಒಳಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


