ಮಹೇಂದ್ರ ಸಿಂಗ್ ಧೋನಿ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ವಿರೇಂದ್ರ ಸೆಹ್ವಾಗ್
ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಭಾರತ ತಂಡಕ್ಕೆ ಮರಳುವುದು ತುಂಬಾ ಕಠಿಣ ಎಂದು ಮಾಜಿ ಆರಂಭಿಕ ಡ್ಯಾಶರ್ ವೀರೇಂದ್ರ ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ.

ಅಹಮದಾಬಾದ್: ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಭಾರತ ತಂಡಕ್ಕೆ ಮರಳುವುದು ತುಂಬಾ ಕಠಿಣ ಎಂದು ಮಾಜಿ ಆರಂಭಿಕ ಡ್ಯಾಶರ್ ವೀರೇಂದ್ರ ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ.
ಧೋನಿ ಸ್ಥಾನಕ್ಕೆ ಮತ್ತೊಬ್ಬರನ್ನು ಆಯ್ಕೆ ಮಾಡುವ ಕುರಿತು ಆಯ್ಕೆಗಾರರು ಈಗಾಗಲೇ ಎದುರು ನೋಡುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಸೆಹ್ವಾಗ್, ''ಅವರು ಎಲ್ಲಿಗೆ ಹೊಂದಿಕೊಳ್ಳುತ್ತಾರೆ.
ರಿಷಭ್ ಪಂತ್ ಮತ್ತು ಕೆ.ಎಲ್. ರಾಹುಲ್ ಅವರಂತಹವರು ಈಗಾಗಲೇ ಅವರ ರೂಪದಲ್ಲಿದ್ದಾರೆ, ಅದರಲ್ಲೂ ವಿಶೇಷವಾಗಿ ತಡವಾಗಿ ಉತ್ತಮವಾಗಿ ಪ್ರದರ್ಶನ ನೀಡುತ್ತಿರುವುದರಿಂದ, ನಾವು ಅವರೊಂದಿಗೆ ಏಕೆ ಅಂಟಿಕೊಳ್ಳಬಾರದು ಎಂಬುದಕ್ಕೆ ಯಾವುದೇ ಕಾರಣವಿಲ್ಲ ಎಂದು ನಾನು ಭಾವಿಸುತ್ತೇನೆ '' ಎಂದು 41 ವರ್ಷದ ಮಾಜಿ ಆಟಗಾರ ಹೇಳಿದ್ದಾರೆ.
ಒಟ್ಟಿನಲ್ಲಿ ಚಾಂಪಿಯನ್ ಆಟಗಾರನ ಕ್ರಿಕೆಟ್ ಭವಿಷ್ಯ ಏನಾಗಲಿದೆ ಎಂಬುದು ಬಹಳಷ್ಟು ಗೊಂದಲಗಳಿಗೆ ಎಡೆಮಾಡಿಕೊಟ್ಟಿದೆ.
ನ್ಯೂಜಿಲೆಂಡ್ ಸರಣಿಯಲ್ಲಿನ ಕಳಪೆ ಪ್ರದರ್ಶನದ ಬಗ್ಗೆ ಪ್ರತಿಕ್ರಿಯೆ ನೀಡಿರುವ ವೀರು, ಏಕದಿನ ಹಾಗೂ ಟೆಸ್ಟ್‌ನಲ್ಲಿ ಕಿವೀಸ್ ನಮಗಿಂತಲೂ ಉತ್ತಮ ಪ್ರದರ್ಶನ ನೀಡಿರುವುದನ್ನು ಒಪ್ಪಿಕೊಳ್ಳಬೇಕು. ಟಿ20ನಲ್ಲೂ ನಿಕಟ ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿದೆ. ಚುಟುಕು ಕ್ರಿಕೆಟ್‌ನಲ್ಲಿ ಬೇಗನೇ ಕಮ್‌ಬ್ಯಾಕ್ ಮಾಡುವುದು ಕಷ್ಟಸಾಧ್ಯ ಎಂದರು.
ಅದೇ ಹೊತ್ತಿಗೆ ಗಾಯ ಮುಕ್ತಗೊಂಡು ತಂಡಕ್ಕೆ ಆಗಮಿಸಿರುವ ಹಾರ್ದಿಕ್ ಪಾಂಡ್ಯ ತಮ್ಮ ಆಲ್‌ರೌಂಡರ್ ಸಾಮರ್ಥ್ಯದ ಮೂಲಕ ದೊಡ್ಡ ವ್ಯತ್ಯಾಸಕ್ಕೆ ಕಾರಣವಾಗಲಿದ್ದಾರೆ ಎಂಬುದಾಗಿ ವಿರೇಂ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


