ಟೆಸ್ಟ್ ಗೆ ಅಲಿ, ಏಕದಿನ, ಟಿ20ಗೆ ಬಾಬರ್ ನೇತೃತ್ವ: ಪಿಸಿಬಿ
ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ 2017ರ ಆವೃತ್ತಿಯಲ್ಲಿ ಪಾಕಿಸ್ತಾನಕ್ಕೆ ಪ್ರಶಸ್ತಿ ಗೆದ್ದುಕೊಟ್ಟು, ಐಸಿಸಿ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಹಲವು ತಿಂಗಳು ಕಾಲ ನಂ.1 ಸ್ಥಾನದಲ್ಲಿ ಉಳಿಯುವಂತೆ ಮಾಡಿದ್ದ ಯಶಸ್ವಿ ನಾಯಕ ಸರ್ಫರಾಜ್ ಅಹ್ಮದ್ ಅವರ ಭವಿಷ್ಯ ಬಹುತೇಕ ಕೊನೆಗೊಂಡಂತಾಗಿದೆ.

ಕರಾಚಿ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ 2017ರ ಆವೃತ್ತಿಯಲ್ಲಿ ಪಾಕಿಸ್ತಾನಕ್ಕೆ ಪ್ರಶಸ್ತಿ ಗೆದ್ದುಕೊಟ್ಟು, ಐಸಿಸಿ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಹಲವು ತಿಂಗಳು ಕಾಲ ನಂ.1 ಸ್ಥಾನದಲ್ಲಿ ಉಳಿಯುವಂತೆ ಮಾಡಿದ್ದ ಯಶಸ್ವಿ ನಾಯಕ ಸರ್ಫರಾಜ್ ಅಹ್ಮದ್ ಅವರ ಭವಿಷ್ಯ ಬಹುತೇಕ ಕೊನೆಗೊಂಡಂತಾಗಿದೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಬುಧವಾರ ತನ್ನ ಅಧಿಕೃತ ಒಪ್ಪಂದ ಪಡೆದಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದೇ ವೇಳೆ ಟೆಸ್ಟ್ ತಂಡಕ್ಕೆ ಅಜರ್ ಅಲಿ ಅವರನ್ನು ಮತ್ತು ಅಂತಾರಾಷ್ಟ್ರೀಯ ಟಿ20 ಮತ್ತು ಏಕದಿನ ಕ್ರಿಕೆಟ್ ತಂಡಗಳಿಗೆ ಯುವ ಬ್ಯಾಟ್ಸ್‌ಮನ್ ಬಾಬರ್ ಅಜಮ್ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಿದೆ.
ಇದಕ್ಕೂ ಮೊದಲು ಟೆಸ್ಟ್ ಮತ್ತು ಟಿ20 ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದ ಅನುಭವಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಸರ್ಫರಾಜ್ ಅಹ್ಮದ್ ಅವರನ್ನು ಈಗ ಏಕದಿನ ಕ್ರಿಕೆಟ್ ತಂಡದಿಂದಲೂ ಹೊರಗಿಡಲಾಗಿದೆ.
2019ರ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ನಾಕ್‌ಔಟ್ ಹಂತಕ್ಕೆ ತಲುಪಲು ವಿಫಲವಾಗಿತ್ತು. ಇದಕ್ಕೆ ಸರ್ಫರಾಜ್ ಅಹ್ಮದ್ ಅವರನ್ನು ಬಲಿಪಶು ಮಾಡಲಾಗಿತ್ತು.
"ಅಜರ್ ಅಲಿ ಮತ್ತು ಬಾಬರ್ ಅಜಮ್‌ಗೆ ನಾಯಕತ್ವದಲ್ಲಿ ಮುಂದುವರಿಯುವ ಅವಕಾಶ ಸಿಕ್ಕಿರುವುದಕ್ಕೆ ಶುಭಾಶಯ ಹೇಳಬಯಸುತ್ತೇನೆ. ಆಟಗಾರರಿಗೆ ತಮ್ಮ ಭವಿಷ್ಯದ ದಾರಿ ರೂಪಿಸಿಕೊಳ್ಳಲು ನಾಯಕತ್ವದ ಅಗತ್ಯತೆ ಇತ್ತು. ಹೀಗಾಗಿ ಇದೊಂದು ಉತ್ತಮ ನಿರ್ಧಾರವಾಗಿದೆ," ಎಂದು ಪಾಕಿಸ್ತಾನ ತಂಡದ ಮುಖ್ಯ ಆಯ್ಕೆಗಾರ ಮತ್ತು ಮುಖ್ಯ ಕೋಚ್ ಮಿಸ್ಬಾ ಉಲ್ ಹಕ್ ಹೇಳಿರುವುದಾಗಿ ಪಿಸಿಬಿ ಪ್ರಕಟಣೆಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


