ಇಂಗ್ಲೆಂಡ್ ಪ್ರವಾಸ ಬೆಳಸಲಿರುವ ಪಾಕ್
ಜಾಗತಿಕ ಸಾಂಕ್ರಾಮಿಕ ರೋಗವಾಗಿ ಮಾರ್ಪಟ್ಟಿರುವ ಕೊರೊನಾ ವೈರಸ್‌ನ ಭೀತಿಯ ಹೊರತಾಗಿಯೂ ಕ್ರಿಕೆಟ್ ಸರಣಿಗೆ ಪಾಕಿಸ್ತಾನಕ್ಕೆ ಆತಿಥ್ಯ ವಹಿಸಲು ಇಂಗ್ಲೆಂಡ್ ಸಿದ್ಧವಾಗಿದೆ.

ಲಂಡನ್: ಜಾಗತಿಕ ಸಾಂಕ್ರಾಮಿಕ ರೋಗವಾಗಿ ಮಾರ್ಪಟ್ಟಿರುವ ಕೊರೊನಾ ವೈರಸ್‌ನ ಭೀತಿಯ ಹೊರತಾಗಿಯೂ ಕ್ರಿಕೆಟ್ ಸರಣಿಗೆ ಪಾಕಿಸ್ತಾನಕ್ಕೆ ಆತಿಥ್ಯ ವಹಿಸಲು ಇಂಗ್ಲೆಂಡ್ ಸಿದ್ಧವಾಗಿದೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮತ್ತು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಇತ್ತೀಚಿಗೆ ಸರಣಿಗಾಗಿ ಮಾತುಕತೆ ನಡೆಸಿವೆ. ಅದರ ನಂತರ ಪಿಸಿಬಿ ಪ್ರವಾಸದ ಬಗ್ಗೆ ಸಾಕಷ್ಟು ಆಶಾವಾದಿಯಾಗಿ ಕಾಣುತ್ತದೆ. ಇಸಿಬಿಯ ಆಶ್ವಾಸನೆಯ ನಂತರ ಎರಡು ಮಂಡಳಿಗಳು ತಾತ್ವಿಕವಾಗಿ ಒಪ್ಪಿಕೊಂಡಿವೆ. ಈ ಪ್ರವಾಸದಲ್ಲಿ ಆಡಲು ಪಾಕಿಸ್ತಾನಕ್ಕೆ ಮೂರು ಟೆಸ್ಟ್ ಮತ್ತು ಮೂರು ಟಿ 20 ಪಂದ್ಯ ಆಡಬೇಕಿವೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಕ್ರೀಡಾಂಗಣದ ಒಳಭಾಗದಲ್ಲೇ ಹೊಟೆಲ್ ಗಳ ವ್ಯವಸ್ಥೆ ಮಾಡಿ ಪ್ರೇಕ್ಷಕರಿರಲ್ಲದೆಯೇ (closed doors)ಪಂದ್ಯಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಪಿಸಿಬಿ ಈ ಬಗ್ಗೆ ಮಾಹಿತಿ ನೀಡಿದ್ದು, 4 ಚಾರ್ಟೆಡ್ ಫ್ಲೈಟ್ ಗಳ ಮೂಲಕ 25 ಆಟಗಾರರು ಇಂಗ್ಲೆಂಡ್ ಗೆ ಜುಲೈ ಮೊದಲ ವಾರದಲ್ಲಿ ಪ್ರಯಾಣಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


