ಕ್ರಿಕೆಟ್

 ರಾಜಸ್ಥಾನ ರಾಯಲ್ಸ್ ತಂಡವನ್ನು 60 ರನ್ ಗಳಿಂದ ಸೋಲಿಸಿದ ಕೆಕೆಆರ್,  ಫ್ಲೇ ಆಫ್ ಕನಸು ಜೀವಂತ

ಮಹತ್ವದ ಪಂದ್ಯದಲ್ಲಿ ನಿರಾಸೆ ಅನುಭವಿಸಿದ ರಾಜಸ್ಥಾನ ರಾಯಲ್ಸ್ ಎಡವಿದ್ದು, ಫ್ಲೇ ಆಫ್ ರೇಸ್ ನಿಂದ ಹೊರಗೆ ಬಿದ್ದಿದೆ.ಇನ್ನೂ ಈ ಪಂದ್ಯವನ್ನು 60 ರನ್ ಗಳ ಅಂತರದಲ್ಲಿ ಗೆದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ, ಫ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

 ರಾಜಸ್ಥಾನ ರಾಯಲ್ಸ್ ತಂಡವನ್ನು 60 ರನ್ ಗಳಿಂದ ಸೋಲಿಸಿದ ಕೆಕೆಆರ್,  ಫ್ಲೇ ಆಫ್ ಕನಸು ಜೀವಂತ
ಕೆಕೆಆರ್ ತಂಡ
Published On :

ದುಬೈ: ಮಹತ್ವದ ಪಂದ್ಯದಲ್ಲಿ ನಿರಾಸೆ ಅನುಭವಿಸಿದ ರಾಜಸ್ಥಾನ ರಾಯಲ್ಸ್ ಎಡವಿದ್ದು, ಫ್ಲೇ ಆಫ್ ರೇಸ್ ನಿಂದ ಹೊರಗೆ ಬಿದ್ದಿದೆ.
ಇನ್ನೂ ಈ ಪಂದ್ಯವನ್ನು 60 ರನ್ ಗಳ ಅಂತರದಲ್ಲಿ ಗೆದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ, ಫ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

ಮೊದಲು ಬ್ಯಾಟ್ ಮಾಡಿದ ಕೆಕೆಆರ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 191 ರನ್ ಕಲೆ ಹಾಕಿತು. ರಾಜಸ್ಥಾನ ರಾಯಲ್ಸ್ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 131 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಎಂಟನೇ ಸ್ಥಾನದಲ್ಲಿದ್ದ ಕೆಕೆಆರ್ ನಾಲ್ಕನೇ ಸ್ಥಾನಕ್ಕೆ ಬಡ್ತಿ ಪಡೆಯಿತು.

ಕೆಕೆಆರ್ ಪರ ಉತ್ತಮ ದಾಳಿ ನಡೆಸಿದ ಪ್ಯಾಟ್ ಕಮಿನ್ಸ್ 34 ರನ್ ನೀಡಿ ಪ್ರಮುಖ 4 ವಿಕೆಟ್ ಗಳನ್ನು ಕಬಳಿಸಿದರು. ಶಿವಂ ಮಾವಿ ಹಾಗೂ ವರುಣ್ ಚಕ್ರವರ್ತಿ ಎರಡೆರಡು ವಿಕೆಟ್ ಪಡೆದರು.ಕಮಲೇಶ್ ನಾಗರಕೋಟೆ ಒಂದು ವಿಕೆಟ್ ಗಳಿಸಿದರು. ಇದರೊಂದಿಗೆ ರಾಜಸ್ಥಾನ ರಾಯಲ್ಸ್ ಪಾಯಿಂಟ್ಸ್ ಪಟ್ಟಿಯಲ್ಲಿ 8ನೇ ಸ್ಥಾನಕ್ಕೆ ಕುಸಿಯಿತು. 

ಮಂಗಳವಾರ ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಸೋಲು ಕಂಡರೆ, ಕೆಕೆಆರ್ ಫ್ಲೇ ಆಫ್ ಹಂತ ತಲುಪಲು ಅವಕಾಶವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.