ಐಪಿಎಲ್ ಗೆ ಶೇನ್ ವ್ಯಾಟ್ಸನ್ ವಿದಾಯ: ವರದಿ
ಆಸ್ಟ್ರೇಲಿಯಾದ ಮಾಜಿ ಆಟಗಾರ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ (ಸಿಎಸ್‌ಕೆ) ತಂಡದ ಆರಂಭಿಕ ಆಟಗಾರ ಶೇನ್ ವ್ಯಾಟ್ಸನ್ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ(ಐಪಿಎಲ್) ಕಳಪೆ ಪ್ರದರ್ಶನ ನೀಡಿ ಹೊರಬಿದ್ದ ಬಿನ್ನಲ್ಲೇ ನಿವೃತ್ತಿ ಹೊಂದಲಿದ್ದಾರೆ. ಈ ಮೂಲಕ ಚೆನ್ನೈ ತಂಡದ ಮೊದಲ ವಿಕೆಟ್ ಪತನಗೊಂಡಿದೆ.

ದುಬೈ: ಆಸ್ಟ್ರೇಲಿಯಾದ ಮಾಜಿ ಆಟಗಾರ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ (ಸಿಎಸ್‌ಕೆ) ತಂಡದ ಆರಂಭಿಕ ಆಟಗಾರ ಶೇನ್ ವ್ಯಾಟ್ಸನ್ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ(ಐಪಿಎಲ್) ಕಳಪೆ ಪ್ರದರ್ಶನ ನೀಡಿ ಹೊರಬಿದ್ದ ಬಿನ್ನಲ್ಲೇ ನಿವೃತ್ತಿ ಹೊಂದಲಿದ್ದಾರೆ. ಈ ಮೂಲಕ ಚೆನ್ನೈ ತಂಡದ ಮೊದಲ ವಿಕೆಟ್ ಪತನಗೊಂಡಿದೆ.
ಐಪಿಎಲ್‌ನ 13ನೇ ಆವೃತ್ತಿಯ ತನ್ನ ಕೊನೆಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ, ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ವಿರುದ್ದ ಜಯ ದಾಖಲಿಸಿದರೂ ಪಂದ್ಯಾವಳಿಯಿಂದ ಹೊರಬಿದ್ದ ನಂತರ ಶೇನ್ ವ್ಯಾಟ್ಸನ್ ವಿದಾಯ ಘೋಷಿಸಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ.
ಪಂಜಾಬ್ ವಿರುದ್ಧದ ಪಂದ್ಯ ಗೆಲುವಿನ ಬಳಿಕ ಶೇನ್ ವಾಟ್ಸನ್ ಡ್ರೆಸ್ಸಿಂಗ್ ರೂಂನಲ್ಲಿ ಸಹ ಆಟಗಾರರ ಜೊತೆ ನಿವೃತ್ತಿ ಘೋಷಣೆಯ ವಿಚಾರವನ್ನು ಹಂಚಿಕೊಂಡಿದ್ದಾರೆ ಎನ್ನಲಾಗಿದೆ.
ಇದೇ ವೇಳೆ ಅವರು ಬಹಳ ಭಾವನಾತ್ಮಕವಾಗಿದ್ದರು. ಫ್ರಾಂಚೈಸಿಗಳ ಪರ ಆಡಿದ್ದಕ್ಕೆ ನನಗೆ ಬಹಳ ಹೆಮ್ಮೆಯಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


