ಐಪಿಎಲ್ 2020: ಪ್ಲೇ ಆಫ್ ನಿರ್ಧಾರದ ಪಂದ್ಯದಲ್ಲಿ ಟಾಸ್ ಸೋತು ಆರ್ ಸಿಬಿ ಬ್ಯಾಟಿಂಗ್, Live Score ಇಲ್ಲಿದೆ!
ಐಪಿಎಲ್ 13ನೇ ಆವೃತ್ತಿಯ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಟಿಂಗ್ ಆರಂಭಿಸಿದೆ.

ದುಬೈ: ಐಪಿಎಲ್ 13ನೇ ಆವೃತ್ತಿಯ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಟಿಂಗ್ ಆರಂಭಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಗೆದ್ದರೆ ಪಾಯಿಂಟ್ಸ್ ಟೇಬಲ್‌ನಲ್ಲಿ ಎರಡನೇ ಸ್ಥಾನ ಪಡೆಯಲಿದೆ ಹಾಗೂ ಸುಲಭವಾಗಿ ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಲಿದೆ. ಒಂದು ವೇಳೆ ಸೋತರೆ ಏನಾಗಬಹುದು ಎಂಬಂತೆ ವಿಶ್ಲೇಷಣೆಯನ್ನು ಈ ಕೆಳಕಂಡಂತೆ ನೀಡಲಾಗಿದೆ.
ಸತತ ಮೂರು ಪಂದ್ಯಗಳಿಂದ ಸೋಲು ಅನುಭವಿಸಿರುವ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿರ್ಣಾಯಕ ಹಂತದಲ್ಲಿದೆ. ಇಂದು ರಾತ್ರಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಲು ಸಜ್ಜಾಗಿದೆ. ಡೆಲ್ಲಿ ವಿರುದ್ಧ ಗೆಲುವು ಪಡೆದರೆ, ಬೆಂಗಳೂರು ಪಾಯಿಂಟ್ಸ್ ಟೇಬಲ್‌ನಲ್ಲಿ ಎರಡನೇ ಸ್ಥಾನವನ್ನು ಪಡೆಯಲಿದೆ.
ಒಂದು ವೇಳೆ ಸೋತರೆ, ಅತ್ಯುತ್ತಮ ರನ್‌ರೇಟ್ ಹೊಂದಿರುವ ಸನ್‌ರಯಸರ್ಸ್ ಹೈದರಾಬಾದ್ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲುವ ಅಗತ್ಯವಿದೆ. ಒಂದು ವೇಳೆ ಎಸ್‌ಆರ್‌ಎಚ್ ಗೆದ್ದರೆ, ಆರ್‌ಸಿಬಿ 14 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಪಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


