ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಮರ್ಲಾನ್ ಸ್ಯಾಮುಯೆಲ್ಸ್ ವಿದಾಯ
ವೆಸ್ಟ್ ಇಂಡೀಸ್ ತಂಡದ ಆಲ್‌ರೌಂಡರ್ ಮರ್ಲಾನ್ ಸ್ಯಾಮುಯೆಲ್ಸ್ ಕ್ರಿಕೆಟ್ ವೃತ್ತಿ ಜೀವನಕ್ಕೆ ಬುಧವಾರ ವಿದಾಯ ಘೋಷಿಸಿದ್ದಾರೆ.

ಲಂಡನ್: ವೆಸ್ಟ್ ಇಂಡೀಸ್ ತಂಡದ ಆಲ್‌ರೌಂಡರ್ ಮರ್ಲಾನ್ ಸ್ಯಾಮುಯೆಲ್ಸ್ ಕ್ರಿಕೆಟ್ ವೃತ್ತಿ ಜೀವನಕ್ಕೆ ಬುಧವಾರ ವಿದಾಯ ಘೋಷಿಸಿದ್ದಾರೆ.
ಎರಡು ಟಿ20 ವಿಶ್ವಕಪ್ ಫೈನಲ್ ಗೆಲುವಿನಲ್ಲಿ ಮರ್ಲಾನ್ ಸ್ಯಾಮುಯೆಲ್ಸ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. 2018ರ ಡಿಸೆಂಬರ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಅವರು ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಡಿದ್ದರು.
ಇಎಸ್‌ಪಿಎನ್ ವರದಿ ಪ್ರಕಾರ, ಮರ್ಲಾನ್ ಸ್ಯಾಮುಯೆಲ್ಸ್ ಅವರು ಈ ವರ್ಷ ಜೂನ್‌ನಲ್ಲಿಯೇ ತಮ್ಮ ನಿವೃತ್ತಿ ಬಗ್ಗೆ ಕ್ರಿಕೆಟ್ ವೆಸ್ಟ್ ಇಂಡೀಸ್‌ಗೆ ತಿಳಿಸಿದ್ದರು ಎನ್ನಲಾಗಿದೆ.
ಸಿಡಬ್ಲ್ಯುಐ ಸಿಇಓ ಜಾನಿ ಗ್ರೇವ್ ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಕೆಲ ಕಾರಣಗಳಿಂದ ವೆಸ್ಟ್ ಇಂಡೀಸ್ ಆಲ್‌ರೌಂಡರ್ ಸುದ್ದಿಯಲ್ಲಿದ್ದಾರೆ. ಇಂಗ್ಲೆಂಡ್ ತಂಡದ ಸ್ಟಾರ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಕೆಟ್ಟ ಕಾಮೆಂಟ್ ಹಾಕಿದ್ದರಿಂದ ಮರ್ಲಾನ್ ಸ್ಯಾಮುಯೆಲ್ಸ್ ಅವರನ್ನು ಕಳೆದ ಅಕ್ಟೋಬರ್ ತಿಂಗಳಲ್ಲಿ ಆಸ್ಟ್ರೇಲಿಯಾ ಮಾಜಿ ಸ್ಪಿನ್ನರ್ ಶೇನ್ ವಾರ್ನ್ ತರಾಟೆಗೆ ತೆಗೆದುಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


