ರೋಹಿತ್ ಶರ್ಮಾಗೆ ಗಾಯ: ಬಿಸಿಸಿಐ ಪಾರದರ್ಶಕತೆಯ ಕೊರತೆ ಬಹಿರಂಗ
ಐಪಿಎಲ್ ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ನಂತರ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಗಾಯದ ಸಮಸ್ಯೆ ಬಗ್ಗೆ ಈಗಾಗಲೇ ಭಾರಿ ಚರ್ಚೆ ಶುರುವಾಗಿದೆ.

ನವದೆಹಲಿ: ಐಪಿಎಲ್ ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ನಂತರ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಗಾಯದ ಸಮಸ್ಯೆ ಬಗ್ಗೆ ಈಗಾಗಲೇ ಭಾರಿ ಚರ್ಚೆ ಶುರುವಾಗಿದೆ. ಗಾಯದಿಂದಾಗಿಯೇ ಈ ತಿಂಗಳಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಎಲ್ಲಾ ಮೂರು ಮಾದರಿಯ ಪಂದ್ಯಗಳಿಂದ ರೋಹಿತ್ ಶರ್ಮಾರನ್ನು ರಾಷ್ಟ್ರೀಯ ಆಯ್ಕೆದಾರರು ನಿರ್ಲಕ್ಷಿಸಿದ್ದಾರೆ.
ರೋಹಿತ್ ಶರ್ಮಾ ಅವರನ್ನು ಏಕೆ ಟೆಸ್ಟ್, ಏಕದಿನ ಮತ್ತು ಟಿ-20 ಪಂದ್ಯಗಳಿಂದ ರೋಹಿತ್ ಶರ್ಮಾ ಅವರನ್ನು ಏಕೆ ಹೊರಗಿಡಲಾಗಿದೆ ಎಂಬುದರ ಬಗ್ಗೆ ಬಿಸಿಸಿಐ ಇಲ್ಲಿಯವರೆಗೂ ವಿವರಿಸಿಲ್ಲ. ತಂಡ ಆಯ್ಕೆ ಬಗ್ಗೆ ಯಾವುದೇ ಬಿಸಿಸಿಐ ಅಧಿಕಾರಿಗಳು ಮಾಧ್ಯಮಗಳೊಂದಿಗೆ ಮಾತನಾಡಿಲ್ಲ.
ರೋಹಿತ್ ಶರ್ಮಾ ಮತ್ತು ಇಶಾಂತ್ ಶರ್ಮಾ ಅವರ ಗಾಯದ ಬಗ್ಗೆ ಬಿಸಿಸಿಐ ವೈದ್ಯಕೀಯ ತಂಡ ನಿಗಾ ವಹಿಸಲಿದೆ ಎಂದು ಅಕ್ಟೋಬರ್ 26 ರಂದು ಬಿಸಿಸಿಐ ಹೇಳಿಕೆ ನೀಡಿತ್ತು. ಇಬ್ಬರು ಆಟಗಾರರಿಗೆ ಯಾವ ರೀತಿಯ ಗಾಯಗಳಾಗಿವೆ ಎಂಬುದನ್ನು ಸ್ಪಷ್ಪಪಡಿಸಿಲ್ಲ. ಅಲ್ಲದೇ ಗಾಯ ಎಂಬ ಪದವನ್ನೂ ಕೂಡಾ ಉಲ್ಲೇಖಿಸಿಲ್ಲ. ಇದು ಬಿಸಿಸಿಐನ ಪಾರದರ್ಶಕತೆಯ ಕೊರೆತೆಯಾಗಿದೆ. ಮುಂಬೈ ಇಂಡಿಯನ್ಸ್ ತಂಡದ ನಾಯಕನೊಂದಿಗೆ ಸಂವಹನ ನಡೆಸಿಲ್ಲ, ಇದು ಇದೀಗ ಎಲ್ಲರನ್ನು ಮುಜುಗರಕ್ಕೆ ತಳ್ಳಿದ್ದು, ಏನು ನಡೆದಿದೆ ಎಂಬುದು ಸ್ಪಷ್ಟವಾಗಿ ಕಂಡುಬರುತ್ತಿದೆ.
ಮಂಗಳವಾರ ನಡೆದ ಪಂದ್ಯದ ನಂತರ ಮಾತನಾಡಿದ ರೋಹಿತ್ ಶರ್ಮಾ, ತಾನು ಚೆನ್ನಾಗಿದ್ದು, ಇಲ್ಲಿ ಇನ್ನೊಂದಿಷ್ಟು ಪಂದ್ಯವನ್ನಾಡಲು ಎದುರು ನೋಡುತ್ತಿದ್ದೇನೆ. ಏನಾಗುತ್ತದೆಯೋ ಎಂಬುದನ್ನು ನೋಡೋಣ ಎಂದು ಹೇಳಿದ್ದರು. ಅದೇ ದಿನ ಗಾಯದ ಸಮಸ್ಯೆಯಿಂದ ರೋಹಿತ್ ಶರ್ಮಾ ಅವರನ್ನು ಆಸ್ಟ್ರೇಲಿಯಾ ಪ್ರವಾಸಕ್ಕೆ ಆಯ್ಕೆ ಮಾಡಲಿಲ್ಲ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿರುವುದಾಗಿ ಕೆಲ ಮಾಧ್ಯಮಗಳು ವರದಿ ಮಾಡಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


