ಏಕದಿನ ರ್ಯಾಂಕಿಂಗ್: ಅಗ್ರಸ್ಥಾನದಲ್ಲೇ ಮುಂದುವರೆದ ಕೊಹ್ಲಿ, ರೋಹಿತ್
ಐಸಿಸಿ ಏಕದಿನ ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು ಟೀಂ ಇಂಡಿಯಾ ಸ್ಟಾರ್ ಬ್ಯಾಟ್ಸ್ ಮನ್ ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅಗ್ರ ಎರಡು ಸ್ಥಾನಗಳಲ್ಲೇ ಮುಂದುವರೆದಿದ್ದಾರೆ.

ದುಬೈ: ಐಸಿಸಿ ಏಕದಿನ ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು ಟೀಂ ಇಂಡಿಯಾ ಸ್ಟಾರ್ ಬ್ಯಾಟ್ಸ್ ಮನ್ ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅಗ್ರ ಎರಡು ಸ್ಥಾನಗಳಲ್ಲೇ ಮುಂದುವರೆದಿದ್ದಾರೆ.
ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿನಿಂದ ಯಾವುದೇ ಅಂತಾರಾಷ್ಟ್ರೀಯ ಕ್ರಿಕೆಟ್ ಟೂರ್ನಿಗಳು ನಡೆದಿಲ್ಲ. ಒಂದೆರೆಡು ಟೂರ್ನಿಗಳನ್ನು ಬಿಟ್ಟರೆ. ಇನ್ನು ಟೀಂ ಇಂಡಿಯಾ ಮುಂದಿನ ಆಸ್ಟ್ರೇಲಿಯಾ ಪ್ರವಾಸದಲ್ಲಿ ಮೊದಲ ಅಂತಾರಾಷ್ಟ್ರೀಯ ಟೂರ್ನಿಯಲ್ಲಿ ಭಾಗಿಯಾಗಲಿದೆ.
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 871 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದರೆ ರೋಹಿತ್ ಶರ್ಮಾ 855 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದಾರೆ. ಇನ್ನು ಪಾಕಿಸ್ತಾನ ಬಾಬರ್ ಅಜಾಮ್ 837 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
ಇನ್ನು ಏಕದಿನ ಬೌಲಿಂಗ್ ರ್ಯಾಂಕಿಂಗ್ ನಲ್ಲಿ ಟೀಂ ಇಂಡಿಯಾದ ವೇಗಿ ಜಸ್ ಪ್ರೀತ್ ಬುಮ್ರಾ 719 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. 722 ಅಂಕಗಳೊಂದಿಗೆ ನ್ಯೂಜಿಲ್ಯಾಂಡ್ ವೇಗಿ ಟ್ರೆಂಟ್ ಬೌಲ್ಟ್ ಮೊದಲ ಸ್ಥಾನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


