ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಸೇರ್ಪಡೆಗೆ ರಾಹುಲ್ ದ್ರಾವಿಡ್ ಒಲವು
ಟೀಂ ಇಂಡಿಯಾ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರು ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆಗೊಳ್ಳಬೇಕೆಂದು ಪ್ರತಿಪಾದಿಸಿದ್ದಾರೆ.

ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರು ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರಿಸಬೇಕೆಂದು ಪ್ರತಿಪಾದಿಸಿದ್ದಾರೆ.
ಎ ನ್ಯೂ ಇನ್ನಿಂಗ್ಸ್ ಪುಸ್ತಕದ ಬಿಡುಗಡೆಗಾಗಿ ಶುಕ್ರವಾರ ನಡೆದ ವರ್ಚುವಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕ್ರಿಕೆಟ್ ಅನ್ನು ಒಲಿಂಪಿಕ್ಸ್‌ನಲ್ಲಿ ಸೇರಿಸಿಕೊಳ್ಳಬೇಕು. ಅದು ಆಟಕ್ಕೆ ಒಳ್ಳೆಯದು ಎಂದು ದ್ರಾವಿಡ್ ಹೇಳಿದ್ದಾರೆ. 1900 ರಿಂದ ಕ್ರಿಕೆಟ್ ಒಲಿಂಪಿಕ್ಸ್‌ನ ಭಾಗವಾಗಿರಲಿಲ್ಲ. ಆದರೆ, ಕೆಲವು ಸಮಯದಿಂದ, ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಅನ್ನು ಸೇರಿಸಬೇಕು ಎಂಬ ಸಮಾನ ಬೇಡಿಕೆಯಿದೆ ಎಂದಿದ್ದಾರೆ.
ಈ ಬಾರಿ ಐಪಿಎಲ್ ಭರ್ಜರಿ ಯಶಸ್ಸು ಕಂಡಿದ್ದು ಬಹಳ ಸಂತೋಷವಾಗಿದೆ. ಈ ಪ್ರಮಾಣದ ಯಶಸ್ಸು ಅದು ಕಾಣಲು ಸಾಧ್ಯವಾಗಿದ್ದು ಯುನೈಟೆಡ್ ಅರಬ್ ಎಮಿರೈಟ್ಸ್ ನಲ್ಲಿನ ಕ್ವಾಲಿಟಿ ಪಿಚ್ ಗಳಿಂದ, ಸ್ವಲ್ಪ ಯೋಜಿಸಿ ನೋಡಿ, ಯುಎಇಯಂಥ ಪಿಚ್ ಗಳನ್ನು ಒಲಿಂಪಿಕ್ಸ್ ಆಯೋಜಿಸುವ ದೇಶ ಒದಗಿಸಬಹುದಾದರೆ, ಕ್ರಿಕೆಟ್ ಅನ್ನು ಯಾಕೆ ಸೇರಿಸಬಾರದು? ಎಂದು ಪ್ರಶ್ನಿಸಿದರು.
ದ್ರಾವಿಡ್ ಸಕ್ರಿಯ ಕ್ರಿಕೆಟ್ ನಿಂದ ನಿವೃತ್ತರಾಗಿದ್ದರೂ ಕ್ರೀಡೆಗೆ ಹಲವಾರು ವಿಧಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕೋಚ್ ಆಗಿ ಐಪಿಎಲ್ ಟೀಂಗಳಿಗೆ ಮೆಂಟರ್ ಆಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


