ನನ್ನ ಹೃದಯ ಉತ್ತಮವಾಗಿದೆ: ಅಭಿಮಾನಿಗಳಿಗೆ ದೀಪಾವಳಿ ಶುಭಕೋರಿದ ಕಪಿಲ್ ದೇವ್
ಆಂಜಿಯೋಪ್ಲ್ಯಾಸ್ಟಿಗೆ ಒಳಗಾದ ವಾರದ ನಂತರ ಭಾರತದ ಮಾಜಿ ನಾಯಕ ಕಪಿಲ್ ದೇವ್ "ನನ್ನ ಹೃದಯವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ" ಎಂದಿದ್ದಾರೆ. ಅಲ್ಲದೆ ತಾವು ಆರೋಗ್ಯವಂತರಾಗಿರುವುದಾಗಿ ತಿಳಿಸಿದ್ದಾರೆ.

ನವದೆಹಲಿ: ಆಂಜಿಯೋಪ್ಲ್ಯಾಸ್ಟಿಗೆ ಒಳಗಾದ ವಾರದ ನಂತರ ಭಾರತದ ಮಾಜಿ ನಾಯಕ ಕಪಿಲ್ ದೇವ್ "ನನ್ನ ಹೃದಯವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ" ಎಂದಿದ್ದಾರೆ. ಅಲ್ಲದೆ ತಾವು ಆರೋಗ್ಯವಂತರಾಗಿರುವುದಾಗಿ ತಿಳಿಸಿದ್ದಾರೆ.
ಕಳೆದ ತಿಂಗಳು, ಕಪಿಲ್ ಹೃದಯ ಸ್ತಂಭನದಿಂದ ಆಸ್ಪತ್ರೆಗೆ ದಾಖಲಾಗಿದ್ದರು.
"ಎಲ್ಲರಿಗೂ ದೀಪಾವಳಿ ಶುಭಾಶಯಗಳು ಈ ವರ್ಷ ಪ್ರತಿಯೊಬ್ಬರಿಗೂ ಸಾಕಷ್ಟುಸಂತೋಷವನ್ನು ತರುತ್ತದೆ ಎಂದು ನಾನು ಭಾವಿಸುತ್ತೇನೆ. ನಿಮ್ಮ ಶುಭಾಶಯಕ್ಕೆ ಧನ್ಯವಾದಗಳು. ನಾನು ಆರೋಗ್ಯ ಹಾಗೂ ಸಂತೋಷದಿಂದಿದ್ದೇನೆ. ಹೃದಯವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ ವಿಶ್ವದಾದ್ಯಂತ ಎಲ್ಲರಿಗೂ ಸಾಕಷ್ಟು ಸಂತೋಷವನ್ನು ಬಯಸುತ್ತೇನೆ" ಭಾರತದ ಮೊದಲ ವಿಶ್ವಕಪ್ ವಿಜೇತ ನಾಯಕ ತನ್ನ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ತಿಳಿಸಿದ್ದಾರೆ.
ಇಪ್ಪತ್ತು ದಿನಗಳ ನಂತರ ಕಪಿಲ್ ಗುರುವಾರ ಗಾಲ್ಫ್ ಕ್ಲಬ್ ಗೆ ಆಗಮಿಸಿದ್ದರು,ದೆಹಲಿ ಗಾಲ್ಫ್ ಕ್ಲಬ್‌ನಲ್ಲಿ ಅವರು ತಮ್ಮ ಸ್ನೇಹಿತರೊಂದಿಗೆ ಗಾಲ್ಫ್ ಆಡುವ ವೀಡಿಯೊವನ್ನು ಹಂಚಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


