ದೀಪಾವಳಿ ಶುಭಾಶಯ ಕೋರಿದ ವಿರಾಟ್ ಕೊಹ್ಲಿ, ಪಟಾಕಿ ಮುಕ್ತ ಹಬ್ಬ ಆಚರಿಸುವಂತೆ ಅಭಿಮಾನಿಗಳಿಗೆ ಮನವಿ
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಸೇರಿದಂತೆ ಹಲವು ಕ್ರಿಕೆಟಿಗರು ದೇಶವಾಸಿಗಳಿಗೆ ದೀಪಾವಳಿಯ ಶುಭಾಶಯ ಕೋರಿದ್ದಾರೆ.

ನವದೆಹಲಿ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಸೇರಿದಂತೆ ಹಲವು ಕ್ರಿಕೆಟಿಗರು ದೇಶವಾಸಿಗಳಿಗೆ ದೀಪಾವಳಿಯ ಶುಭಾಶಯ ಕೋರಿದ್ದಾರೆ.
"ದೀಪಾವಳಿಯಂದು ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಶುಭಾಶಯಗಳು. ಈ ದೀಪಾವಳಿ ನಿಮಗೆ ಶಾಂತಿ, ಸಮೃದ್ಧಿ ಮತ್ತು ಸಂತೋಷ ತರಲಿ" ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.
ಪರಿಸರವನ್ನು ರಕ್ಷಿಸಲು ಪಟಾಕಿಯನ್ನು ಸಿಡಿಸಬೇಡಿ ಮತ್ತು ಈ ಶುಭ ಸಂದರ್ಭದಲ್ಲಿ ನಿಮ್ಮ ಪ್ರೀತಿಪಾತ್ರರೊಡನೆ ಸರಳವಾದ ದೀಪ ಮತ್ತು ಸಿಹಿತಿಂಡಿಗಳೊಂದಿಗೆ ಬೆಳಕಿನ ಹಬ್ಬವನ್ನು ಆಚರಿಸಿ "ಎಂದು ಕೊಹ್ಲಿ ತಮ್ಮ ಅಧಿಕೃತ ಟ್ವಿಟರ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ.
ವಿರಾಟ್ ಕೊಹ್ಲಿ ಅವರು ಸದ್ಯ ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಸರಣಿಗಾಗಿ ಸಿಡ್ನಿಯಲ್ಲಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ದಂಪತಿಯು ಜನವರಿ ಆರಂಭದಲ್ಲಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಕಾರಣದಿಂದ ಕೊಹ್ಲಿ ಅಡಿಲೇಡ್ನಲ್ಲಿ ಒಂದೇ ಒಂದು ಪಂದ್ಯ ಆಡಿದ ಬಳಿಕ ತವರಿಗೆ ಮರಳಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


