ಅಂತಾರಾಷ್ಟ್ರೀಯ ಕ್ರಿಕೆಟ್ ಆಡಲು ಕನಿಷ್ಠ 15 ವರ್ಷ ವಯಸ್ಸಾಗಿರಬೇಕು: ಐಸಿಸಿ
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕನಿಷ್ಠ ವಯಸ್ಸಿನ ನೀತಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಜಾರಿಗೆ ತಂದಿದೆ. ಈ ನಿಯಮದ ಅನ್ವಯ ಇಂಟರ್‌ನ್ಯಾಷನಲ್ ಕ್ರಿಕೆಟ್ ಆಡಬೇಕಾದರೆ ಆಟಗಾರನಿಗೆ ಕಡ್ಡಾಯವಾಗಿ 15 ವರ್ಷ ವಯಸ್ಸಾಗಿರಬೇಕು.

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕನಿಷ್ಠ ವಯಸ್ಸಿನ ನೀತಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಜಾರಿಗೆ ತಂದಿದೆ. ಈ ನಿಯಮದ ಅನ್ವಯ ಇಂಟರ್‌ನ್ಯಾಷನಲ್ ಕ್ರಿಕೆಟ್ ಆಡಬೇಕಾದರೆ ಆಟಗಾರನಿಗೆ ಕಡ್ಡಾಯವಾಗಿ 15 ವರ್ಷ ವಯಸ್ಸಾಗಿರಬೇಕು.
ಐಸಿಸಿ ಈ ನಿಯಮವನ್ನು ಜಾರಿಗೊಳಿಸಿದ ಹೊರತಾಗಿಯೂ ದೇಶಗಳು ಇನ್ನೂ 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಆಟಗಾರನನ್ನು ಕಣಕ್ಕಿಳಿಸುವ ಆಯ್ಕೆಯನ್ನು ಹೊಂದಿವೆ ಹಾಗೂ ಅಸಾಧಾರಣ ಸನ್ನಿವೇಶಗಳಲ್ಲಿ 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಆಟಗಾರನಿಗೆ ಆಯಾ ದೇಶಕ್ಕಾಗಿ ಆಡಲು ಅವಕಾಶ ನೀಡಲು ಮಂಡಳಿಗಳು ಐಸಿಸಿಗೆ ಅರ್ಜಿ ಸಲ್ಲಿಸಬಹುದು.
ಐಸಿಸಿ ಸ್ಪರ್ಧೆಗಳು, ದ್ವಿಪಕ್ಷೀಯ ಸರಣಿ ಮತ್ತು 19 ವಯೋಮಿತಿ ಸೇರಿದಂತೆ ಎಲ್ಲಾ ಕ್ರಿಕೆಟ್‌ನಲ್ಲಿ ಅನ್ವಯವಾಗುವಂತೆ ಆಟಗಾರರ ಸುರಕ್ಷತೆಯನ್ನು ಸುಧಾರಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ಕನಿಷ್ಠ ವಯಸ್ಸಿನ ನಿರ್ಬಂಧಗಳನ್ನು ಪರಿಚಯಿಸಿರುವುದನ್ನು ದೃಢಪಡಿಸಿದೆ.
ಪುರುಷ ಅಥವಾ ಮಹಿಳೆಯರ ಕ್ರಿಕೆಟ್‌ನಲ್ಲಿ 19 ವಯೋಮಿತಿ ಹಾಗೂ ಯಾವುದೇ ಸ್ವರೂಪದ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಲು 15 ವರ್ಷ ವಯಸ್ಸನ್ನು ನಿಗದಿಪಡಿಸಲಾಗಿದೆ ಎಂದು ಐಸಿಸಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


