2022ರಲ್ಲಿ ನಡೆಯಬೇಕಾಗಿದ್ದ ಐಸಿಸಿ ಮಹಿಳಾ ಟಿ-20 ವಿಶ್ವಕಪ್ ಟೂರ್ನಿ ಮುಂದೂಡಿಕೆ
2022ರಲ್ಲಿ ನಡೆಯಬೇಕಾಗಿದ್ದ ದಕ್ಷಿಣ ಆಫ್ರಿಕಾ ಆವೃತ್ತಿಯ ಮಹಿಳಾ ಟಿ-20 ವಿಶ್ವಕಪ್ ಟೂರ್ನಿಯನ್ನು ಮೂರು ತಿಂಗಳ ಕಾಲ ಮುಂದೂಡಲಾಗಿದೆ.

ದುಬೈ: 2022ರಲ್ಲಿ ನಡೆಯಬೇಕಾಗಿದ್ದ ದಕ್ಷಿಣ ಆಫ್ರಿಕಾ ಆವೃತ್ತಿಯ ಮಹಿಳಾ ಟಿ-20 ವಿಶ್ವಕಪ್ ಟೂರ್ನಿಯನ್ನು ಮೂರು ತಿಂಗಳ ಕಾಲ ಮುಂದೂಡಲಾಗಿದೆ.
2022ರ ನವೆಂಬರ್ ನಲ್ಲಿ ನಡೆಯಬೇಕಾಗಿದ್ದ ಟೂರ್ನಿಯನ್ನು ಫೆಬ್ರವರಿ 2023ರಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಗುರುವಾರ ತಿಳಿಸಿದೆ.
ಕೋವಿಡ್-19 ಸಾಂಕ್ರಾಮಿಕ ಕಾಯಿಲೆಯ ಕಾರಣ ನ್ಯೂಜಿಲೆಂಡ್ ನಲ್ಲಿ 2021ರಿಂದ 2022ರವರೆಗೆ ನಿಗದಿಯಾಗಿದ್ದ 50 ಓವರ್ ಗಳ ಮಹಿಳಾ ವಿಶ್ವ ಕಪ್ ಟೂರ್ನಿಯನ್ನು ಐಸಿಸಿ ಈ ವರ್ಷದ ಆಗಸ್ಟ್ ತಿಂಗಳಲ್ಲಿ ಮುಂದೂಡಿತ್ತು.
ನವೆಂಬರ್ ನಲ್ಲಿ ನಡೆಯಬೇಕಾಗಿದ್ದ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2023ರ ಫೆಬ್ರವರಿ ತಿಂಗಳಲ್ಲಿ ನಡೆಯಲಿದೆ ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
2022ರ ಜುಲೈನಲ್ಲಿ ಕಾಮನ್ ವೆಲ್ತ್ ಗೇಮ್ಸ್ ನೊಂದಿಗೆ ಮೂರು ಪ್ರಮುಖ ಕ್ರೀಡಾಕೂಟಗಳು ನಡೆಯಲಿದ್ದು, 2023ರಲ್ಲಿ ಯಾವುದೇ ಮಹಿಳಾ ಕ್ರೀಡಾಕೂಟಗಳನ್ನು ನಡೆಯದಿರುವುದರಿಂದ ಟಿ-20 ಮಹಿಳಾ ವಿಶ್ವ ಕಪ್ ಟೂರ್ನಿಗೆ ಆಟಗಾರರ ಸಿದ್ಧತೆಗೆ ಉತ್ತಮ ಬೆಂಬಲ ದೊರೆಯಲಿದೆ ಎಂದು ಐಸಿಸಿ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


