ರೆಟ್ರೋ ಲುಕ್: ಹೊಸ ಜೆರ್ಸಿಯೊಂದಿಗಿನ ಫೋಟೋವನ್ನು ಸಾಮಾಜಿಕ ತಾಣದಲ್ಲಿ ಹಾಕಿದ ಶಿಖರ್ ಧವನ್
ಭಾರತ ಕ್ರಿಕೆಟ್ ತಂಡದ ಎಡಗೈ ಸ್ಟಾರ್ ಬ್ಯಾಟ್ಸ್‌ಮನ್ ಶಿಖರ್ ಧವನ್ ಮಂಗಳವಾರ ಟೀಮ್ ಇಂಡಿಯಾದ ಹೊಸ ಜೆರ್ಸಿಯೊಂದಿಗಿನ ಫೋಟೋವನ್ನು ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇದು ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ತಂಡ ಧರಿಸಲಿದೆ.

ಸಿಡ್ನಿ: ಭಾರತ ಕ್ರಿಕೆಟ್ ತಂಡದ ಎಡಗೈ ಸ್ಟಾರ್ ಬ್ಯಾಟ್ಸ್‌ಮನ್ ಶಿಖರ್ ಧವನ್ ಮಂಗಳವಾರ ಟೀಮ್ ಇಂಡಿಯಾದ ಹೊಸ ಜೆರ್ಸಿಯೊಂದಿಗಿನ ಫೋಟೋವನ್ನು ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇದು ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ತಂಡ ಧರಿಸಲಿದೆ.
ತಂಡದ ಹೊಸ ಜೆರ್ಸಿ ಎಂಪಿಎಲ್(ಮೊಬೈಲ್ ಪ್ರೀಮಿಯರ್ ಲೀಗ್) ಸ್ಪೋರ್ಟ್ಸ್, ಇದು ಟೀಮ್ ಇಂಡಿಯಾದ ಅಧಿಕೃತ ಕಿಟ್ ಪ್ರಾಯೋಜಕರಾಗಿದೆ. ನವೆಂಬರ್ 16 ರಂದು ಭಾರತ ಕ್ರಿಕೆಟ್ ನಿಯಂತ್ರಣಾ ಮಂಡಳಿ (ಬಿಸಿಸಿಐ) ಈ ಘೋಷಣೆ ಮಾಡಿದೆ. ಆಸ್ಟ್ರೇಲಿಯಾ ಪ್ರವಾಸವು ನವೆಂಬರ್ 27 ರಿಂದ ಆರಂಭವಾಗಲಿದ್ದು, ಭಾರತ ತಮ್ಮ ಮೊದಲ ಏಕದಿನ ಪಂದ್ಯವನ್ನು ಆಡುವ ಮೂಲಕ ಒಪ್ಪಂದವು ಪ್ರಾರಂಭವಾಗಲಿದೆ.
ಟ್ವೀಟ್ ನಲ್ಲಿ ಶಿಖರ್ ಧವನ್, ಹೊಸ ಜೆರ್ಸಿ, ಆತ್ಮ ವಿಶ್ವಾಸ ಹೆಚ್ಚುವಂತೆ ಮಾಡಿದೆ. ಸರಣಿಗೆ ಸಿದ್ಧರಾಗಿದ್ದೇವೆ ಎಂದು ಬರೆದುಕೊಂಡಿದ್ದಾರೆ.
ಟೀಂ ಇಂಡಿಯಾದ ಹೊಸ ಜೆರ್ಸಿ ನೋಡಿದರೆ 1991-92ರ ಟೀಂ ಇಂಡಿಯಾ ತೊಟ್ಟಿದ್ದ ಜೆರ್ಸಿ ರೀತಿ ಇದೆ. 1992ರ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಕಡು ನೀಲಿ ಬಣ್ಣದ ಜೆರ್ಸಿಯೊಂದಿಗೆ ಕಣಕ್ಕೆ ಇಳಿದಿತ್ತು.
New jersey, renewed motivation. Ready to go.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


