ಕ್ರಿಕೆಟ್

ಐಸಿಸಿ ನೂತನ ಅಧ್ಯಕ್ಷರಾಗಿ ನ್ಯೂಜಿಲೆಂಡ್ ನ ಗ್ರೇಗ್ ಬಾರ್ಕ್ಲೇ ಆಯ್ಕೆ

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನೂತನ ಅಧ್ಯಕ್ಷರಾಗಿ ನ್ಯೂಜಿಲೆಂಡ್‌ನ ಗ್ರೆಗ್ ಬಾರ್ಕ್ಲೇ ಅವರು ಆಯ್ಕೆಗೊಂಡಿದ್ದಾರೆ.

ಐಸಿಸಿ ನೂತನ ಅಧ್ಯಕ್ಷರಾಗಿ ನ್ಯೂಜಿಲೆಂಡ್ ನ ಗ್ರೇಗ್ ಬಾರ್ಕ್ಲೇ ಆಯ್ಕೆ
ಗ್ರೆಗ್ ಬಾರ್ಕ್ಲೇ
Published On :

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನೂತನ ಅಧ್ಯಕ್ಷರಾಗಿ ನ್ಯೂಜಿಲೆಂಡ್‌ನ ಗ್ರೆಗ್ ಬಾರ್ಕ್ಲೇ ಅವರು ಆಯ್ಕೆಗೊಂಡಿದ್ದಾರೆ. 

ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಹಂಗಾಮಿ ಅಧ್ಯಕ್ಷ ಇಮ್ರಾನ್ ಖವಾಜಾ ವಿರುದ್ದ 11-5 ಮತಗಳ ಬಹುಮತದಿಂದ ಸ್ವತಂತ್ರ ಅಧ್ಯಕ್ಷರಾಗಿ ಆಯ್ಕೆಗೊಂಡು, ಅಧಿಕಾರ ವಹಿಸಿಕೊಂಡಿದ್ದಾರೆ. ಭಾರತದ ಶಶಾಂಕ್ ಮನೋಹರ್ ಅವರ ನಂತರ ಬಾರ್ಕ್ಲೇ ಸ್ವತಂತ್ರವಾಗಿ ಆಯ್ಕೆಯಾದ ಎರಡನೇ  ಅಧ್ಯಕ್ಷರಾಗಿದ್ದಾರೆ.

ಗ್ರೆಗ್ ಬಾರ್ಕ್ಲೇ 2012 ರಿಂದ ನ್ಯೂಜಿಲೆಂಡ್ ಕ್ರಿಕೆಟ್ ನಿರ್ದೇಶಕರಾಗಿದ್ದು, ವಕೀಲರಾಗಿಯೂ ಕಾರ್ಯನಿರ್ವಹಿಸಿದ್ದಾರೆ. 2015 ರ ವಿಶ್ವಕಪ್‌ನ ನಿರ್ದೇಶಕರಾಗಿ, ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾದ ಕೆಲವು ಮಂಡಳಿಗಳ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಏತನ್ಮಧ್ಯೆ, ಐಸಿಸಿ  ಅಧ್ಯಕ್ಷರಾಗಿ ಬಾರ್ಕ್ಲೇಸ್ ಅಧಿಕಾರ ವಹಿಸಿಕೊಂಡ ನಂತರ ಖವಾಜಾ ಹಂಗಾಮಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದಾರೆ. ಜುಲೈನಲ್ಲಿ ಮನೋಹರ್ ಶಶಾಂಕ್ ಅವರ ಅಧಿಕಾರಾವಧಿ ಮುಗಿದ ನಂತರ ಖವಾಜಾ ತಾತ್ಕಾಲಿಕ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿದ್ದರು.

ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬಾರ್ಕ್ಲೇ, 'ಐಸಿಸಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ನನಗೆ ಸಿಕ್ಕ ದೊಡ್ಡ ಗೌರವವಾಗಿದೆ. ನನ್ನನ್ನು ಬೆಂಬಲಿಸಿದ ನನ್ನ ಸಹವರ್ತಿ ಐಸಿಸಿ ನಿರ್ದೇಶಕರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಕ್ರಿಕೆಟ್ ನ ಅಭಿವೃದ್ಧಿಗಾಗಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ. ಕೋವಿಡ್ -19 ನಂತಹ ಸಾಂಕ್ರಾಮಿಕ ರೋಗದಿಂದ ಹೊರಬಂದು ಉತ್ತಮ ಸ್ಥಾನದಲ್ಲಿ ಮುಂದೆ ಸಾಗಲು ಪ್ರಯತ್ನಿಸುತ್ತೇವೆ ಎಂದು ಹೇಳಿದ್ದಾರೆ.

ಈ ಹಿಂದೆ ಐಸಿಸಿಯಲ್ಲಿ ನ್ಯೂಜಿಲೆಂಡ್ ಕ್ರಿಕೆಟ್ ಬೋರ್ಡ್ ನ ಪ್ರತಿನಿಧಿಯಾಗಿದ್ದ ಬಾರ್ಕ್ಲೇ ಇದೀಗ ಅವರ ಸ್ಥಾನಕ್ಕೆ ರಾಜಿನಾಮೆ ನೀಡಿ ಐಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.