ಮೊದಲ ಏಕದಿನ ಪಂದ್ಯ: ಫಿಂಚ್, ಸ್ಮಿತ್ ಭರ್ಜರಿ ಶತಕ; ಭಾರತಕ್ಕೆ 375 ರನ್ ಗಳ ಬೃಹತ್ ಗುರಿ ನೀಡಿದ ಆಸ್ಟ್ರೇಲಿಯಾ
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಚ್ರೇಲಿಯಾ ತಂಡ ಭರ್ಜರಿ ಬ್ಯಾಟಿಂಗ್ ಮಾಡಿ ಭಾರತಕ್ಕೆ 375 ರನ್ ಗಳ ಬೃಹತ್ ಗುರಿ ನೀಡಿದೆ.

ಸಿಡ್ನಿ: ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಚ್ರೇಲಿಯಾ ತಂಡ ಭರ್ಜರಿ ಬ್ಯಾಟಿಂಗ್ ಮಾಡಿ ಭಾರತಕ್ಕೆ 375 ರನ್ ಗಳ ಬೃಹತ್ ಗುರಿ ನೀಡಿದೆ.
ಆಸಿಸ್ ಪರ ನಾಯಕ ಆ್ಯರೋನ್ ಫಿಂಚ್ ಮತ್ತು ಸ್ಟೀವೆನ್ ಸ್ಮಿತ್ ಭರ್ಜರಿ ಶತಕ ಗಳಿಸಿದರೆ, ಸ್ಫೋಟಕ ಬ್ಯಾಟ್ಸಮನ್ ಆರ್ಧ ಶತಕ ಗಳಿಸಿ ಆಸಿಸ್ ಬೃಹತ್ ಮೊತ್ತಕ್ಕೆ ಕಾರಣರಾದರು. ಆ ಮೂಲಕ ಫಿಂಚ್ ಪಡೆ ನಿಗದಿತ 50 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 374 ರನ್ ಗಳಿಸಿತು.
ಮೊದಲು ಕ್ರೀಸ್ ಗೆ ಆಗಮಿಸಿದ ನಾಯಕ ಫಿಂಚ್ ಹಾಗೂ ಡೇವಿಡ್ ವಾರ್ನರ್ ಜೋಡಿ ಮೊದಲ ವಿಕೆಟ್ ಗೆ ಬರೊಬ್ಬರಿ 156 ರನ್ ಗಳ ಜೊತೆಯಾಟವಾಡಿತು. ಈ ಹಂತದಲ್ಲಿ 69 ರನ್ ಗಳಿಸಿದ್ದ ವಾರ್ನರ್ ಶಮಿ ಬೌಲಿಂಗ್ ನಲ್ಲಿ ರಾಹುಲ್ ಗೆ ಕ್ಯಾಚ್ ನೀಡಿ ಹೊರ ನಡೆದರು. ಬಳಿಕ ಸ್ಮಿತ್ ಜೊತೆ ಗೂಡಿದ ಫಿಂಚ್ ತಮ್ಮ ರನ್ ಬೇಟೆ ಮುಂದುವರೆಸಿದರು. ಕೇವಲ 124 ಎಸೆತಗಳಲ್ಲಿ ಫಿಂಚ್ 114 ರನ್ ಗಳಿಸಿ ಬುಮ್ರಾ ಬೌಲಿಂಗ್ ನಲ್ಲಿ ರಾಹುಲ್ ಗೆ ಕ್ಯಾಚ್ ನೀಡಿ ಔಟ್ ಆದರು.
ಬಳಿಕ ಸ್ಯಾಯಿನಿಸ್ ಜೊತೆ ಗೂಡಿದ ಸ್ಮಿತ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ಮಾಡಿದರು. ಕೇವಲ 66 ಎಸೆತಗಳಲ್ಲಿ 105 ರನ್ ಗಳಿಸಿದ ಸ್ಮಿತ್ ಆಸಿಸ್ ಪರ 4ನೇ ವೇಗದ ಶತಕ ಸಿಡಿಸಿದರು. ಬಳಿಕ ಶಮಿ ಬೌಲಿಂಗ್ ನಲ್ಲಿ ಕ್ಲೀನ್ ಬೋಲ್ಡ್ ಆದರು. ಸ್ಟಾಯಿನಿಸ್ ತಾವೆದುರಿಸಿದ ಮೊದಲ ಎಸೆತದಲ್ಲಿ ಔಟ್ ಆದರೆ, ಮ್ಯಾಕ್ಸ್ ವೆಲ್ 45 ರನ್ ಗಳಿಸಿ ತಂಡದ ಬೃಹತ್ ಮೊತ್ತಕ್ಕೆ ತಮ್ಮ ಕಾಣಿಕೆ ನೀಡಿದರು. ಅಂತಿಮವಾಗಿ ಆಸಿಸ್ ತಂಡ ನಿಗದಿತ 50 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 374 ರನ್ ಗಳಿಸಿ, ಭಾರತಕ್ಕೆ ಗೆಲ್ಲಲು 375 ರನ್ ಗಳ ಬೃಹತ್ ಗುರಿ ನೀಡಿತು.
ಭಾರತದ ಪರ ಶಮಿ ಮೂರು ವಿಕೆಟ್ ಪಡೆದರೆ, ಬುಮ್ರಾ, ಸೈನಿ ಮತ್ತು ಜಡೇಜಾ ತಲಾ ಒಂದು ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


