ಟೆಸ್ಟ್ ಸರಣಿ: ಕೊಹ್ಲಿ ಸ್ಥಾನ ತುಂಬಲು ಯಾರಿಂದಲೂ ಸಾಧ್ಯವಿಲ್ಲವೆಂದ ಕ್ಲಾರ್ಕ್
ವಿರಾಟ್ ಕೊಹ್ಲಿಯನ್ನು ವಿಶ್ವದ ಅತ್ಯುತ್ತಮ ಆಟಗಾರ ಎಂದು ಕರೆದ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಮೈಕೆಲ್ ಕ್ಲಾರ್ಕ್, ಅಡಿಲೇಡ್ ಟೆಸ್ಟ್ ಬಳಿಕ ಭಾರತ ತಂಡದ ನಾಯಕನ ನಿರ್ಗಮನ ಸೇರಿದಂತೆ ಹಲವಾರು ಕಾರಣಗಳಿಂದ ಟೀಮ್ ಇಂಡಿಯಾಗೆ ದೊಡ್ಡ ಹೊಡೆತ ಬೀಳಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ವಿರಾಟ್ ಕೊಹ್ಲಿಯನ್ನು ವಿಶ್ವದ ಅತ್ಯುತ್ತಮ ಆಟಗಾರ ಎಂದು ಕರೆದ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಮೈಕೆಲ್ ಕ್ಲಾರ್ಕ್, ಅಡಿಲೇಡ್ ಟೆಸ್ಟ್ ಬಳಿಕ ಭಾರತ ತಂಡದ ನಾಯಕನ ನಿರ್ಗಮನ ಸೇರಿದಂತೆ ಹಲವಾರು ಕಾರಣಗಳಿಂದ ಟೀಮ್ ಇಂಡಿಯಾಗೆ ದೊಡ್ಡ ಹೊಡೆತ ಬೀಳಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ದಂಪತಿ ಜನವರಿ ಆರಂಭದಲ್ಲಿ ಮೊದಲನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಕಾರಣದಿಂದ ಟೀಮ್ ಇಂಡಿಯಾ ನಾಯಕ ಮೊದಲನೇ ಟೆಸ್ಟ್ ಪಂದ್ಯದ ಬಳಿಕ ತವರಿಗೆ ಮುಖ ಮಾಡಲಿದ್ದಾರೆ.ಆದ್ದರಿಂದ ಇನ್ನುಳಿದ ಮೂರು ಪಂದ್ಯಗಳಿಗೆ ಕೊಹ್ಲಿ ಅನುಪಸ್ಥಿತಿ ಭಾರತಕ್ಕೆ ಬಲವಾಗಿ ಕಾಡಲಿದೆ ಎಂಬುದು ಮೈಕಲ್ ಕ್ಲಾರ್ಕ್ ಅಭಿಪ್ರಾಯ.
ವಿಶ್ವದಲ್ಲಿಯೇ ವಿರಾಟ್ ಕೊಹ್ಲಿ ಅತ್ಯುತ್ತಮ ಆಟಗಾರ. ಯಾವುದೇ ಸಮಯದಲ್ಲಿ ಕೊಹ್ಲಿ ಆಡದೇ ಇದ್ದರೆ, ಅದು ಭಾರತ ತಂಡಕ್ಕೆ ದೊಡ್ಡ ನಷ್ಟ. ಇದರರ್ಥ ಭಾರತ ತಂಡ ಉತ್ತಮ ಆರಂಭವನ್ನು ಕಾಣಬೇಕು. ಏಕದಿನ ಹಾಗೂ ಟಿ-20 ಸರಣಿಗಳಲ್ಲಿ ಉತ್ತಮ ಆರಂಭ ಕಂಡಿದ್ದೇ ಆದಲ್ಲಿ , ಮುಂಬರುವ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಇದೇ ಲಯವನ್ನು ಮುಂದುವರಿಸಬಹುದು, ಇಲ್ಲವಾದರೆ ಭಾರತಕ್ಕೆ ಕಠಿಣವಾಗಲಿದೆ ಎಂದು ಕ್ಲಾರ್ಕ್ ಸುದ್ದಿವಾಹಿನಿಯೊಂದಕ್ಕೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


