ರಾಹುಲ್ ಅರ್ಧಶತಕ, ಸಿಎಸ್ ಕೆಗೆ 179 ರನ್ ಗಳ ಗುರಿ ನೀಡಿದ ಪಂಜಾಬ್ ಕಿಂಗ್ಸ್
ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟಿ-20 ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 178 ರನ್ ಕಲೆಹಾಕಿದೆ.

ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟಿ-20 ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 178 ರನ್ ಕಲೆಹಾಕಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ನಾಯಕ ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರವಾಲ್ ಉತ್ತಮ ಆರಂಭ ಒದಗಿಸಿದರು.
ರಾಹುಲ್ 52 ಎಸೆತಗಳಲ್ಲಿ ಏಳು ಬೌಂಡರಿ ಮತ್ತು 1 ಸಿಕ್ಸರ್ ಸಹಿತ 63 ರನ್ ಗಳಿಸಿದರು, ಮಯಾಂಕ್ ಅಗರವಾಲ್ 26, ಮನ್ ದೀಪ್ ಸಿಂಗ್ ಮಾನ್ 17, ನಿಕೋಲಸ್ ಪೊರನ್ 33 ರನ್ ಗಳ ಕೊಡುಗೆ ನೀಡಿದರು. ಸರ್ಫರಾಜ್ ಖಾನ್ 14, ಗ್ಲೇನ್ ಮ್ಯಾಕ್ಸ್ ವೆಲ್ 11 ರನ್ ಕಲೆ ಹಾಕುವುದರ ಮೂಲಕ ತಂಡದ ಮೊತ್ತವನ್ನು 175ರ ಗಡಿ ದಾಟಿಸಿದರು.
ಚೆನ್ನೈ ಸೂಪರ್ ಕಿಂಗ್ಸ್ ಪರ ಶಾರ್ದೂಲ್ ಠಾಕೂರ್ ಎರಡು ವಿಕೆಟ್ ಪಡೆದರೆ, ರವೀಂದ್ರ ಜಡೇಜಾ ಮತ್ತು ಪಿಯೂಷ್ ಚಾವ್ಲಾ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


