ಐಪಿಎಲ್ ನಲ್ಲಿ ಅಪರೂಪದ ದಾಖಲೆ ನಿರ್ಮಿಸಿದ ರವೀಂದ್ರ ಜಡೇಜಾ
ಹಾಲಿ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಲ್ ರೌಂಡರ್ ಆಟಗಾರ ರವೀಂದ್ರ ಜಡೇಜಾ ಅಪರೂಪದ ದಾಖಲೆ ನಿರ್ಮಾಣ ಮಾಡಿದ್ದು, ಐಪಿಎಲ್ ನಲ್ಲಿ 2 ಸಾವಿರ ರನ್ ಮತ್ತು 110 ವಿಕೆಟ್ ಪಡೆದ ಮೊದಲ ಕ್ರಿಕೆಟಿಗ ಎಂಬ ಗೌರವಕ್ಕೆ ಭಾಜನರಾಗಿದ್ದಾರೆ.

ನವದೆಹಲಿ: ಹಾಲಿ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಲ್ ರೌಂಡರ್ ಆಟಗಾರ ರವೀಂದ್ರ ಜಡೇಜಾ ಅಪರೂಪದ ದಾಖಲೆ ನಿರ್ಮಾಣ ಮಾಡಿದ್ದು, ಐಪಿಎಲ್ ನಲ್ಲಿ 2 ಸಾವಿರ ರನ್ ಮತ್ತು 110 ವಿಕೆಟ್ ಪಡೆದ ಮೊದಲ ಕ್ರಿಕೆಟಿಗ ಎಂಬ ಗೌರವಕ್ಕೆ ಭಾಜನರಾಗಿದ್ದಾರೆ.
ಶುಕ್ರವಾರ ನಡೆದ ಸನ್ ರೈಸರ್ಸ್ ವಿರುದ್ಧದ ಪಂದ್ಯದಲ್ಲಿ ಜಡೇಜಾ ಈ ಸಾಧನೆ ಮಾಡಿದ್ದಾರೆ. ಆದರೆ ಜಡೇಜಾ ಪ್ರತಿನಿಧಿಸುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಪಂದ್ಯದಲ್ಲಿ 7 ರನ್ ಗಳಿಂದ ಪರಾಭವಗೊಂಡಿತು. 165 ರನ್ ಗಳ ಗುರಿ ಬೆನ್ನಟ್ಟಿದ ಚೆನ್ನೈ ಪರ ಅರ್ಜುನ ಪ್ರಶಸ್ತಿ ವಿಜೇತ ಜಡೇಜಾ ಕೇವಲ 35 ಎಸೆತಗಳಲ್ಲಿ 50 ರನ್ ಪೇರಿಸಿದರು. ಇದರಲ್ಲಿ 2 ಸಿಕ್ಸರ್ ಐದು ಬೌಂಡರಿಗಳು ಸೇರಿದ್ದವು. ಆ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ 2000 ರನ್ ಮತ್ತು 110 ವಿಕೆಟ್ ಪಡೆದ ಮೊದಲ ಕ್ರಿಕೆಟಿಗ ಎಂಬ ಶ್ರೇಯಕ್ಕೆ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಪಾತ್ರರಾಗಿದ್ದಾರೆ.
ಐಪಿಎಲ್ ನಲ್ಲಿ ರವೀಂದ್ರ ಜಡೇಜಾ ಒಟ್ಟು 174 ಪಂದ್ಯಗಳನ್ನಾಡಿದ್ದು, ಈ ಪೈಕಿ ಚೆನ್ನೈ ತಂಡದ ಮೂಲಕ 106 ಪಂದ್ಯವನ್ನು ಮತ್ತು ಗುಜರಾತ್ ಲಯನ್ಸ್ ಮೂಲಕ 27 ಪಂದ್ಯಗಳನ್ನು, ಕೊಚ್ಚಿ ಟಸ್ಕರ್ಸ್ ನಲ್ಲಿ 14 ಮತ್ತು 27 ಪಂದ್ಯವನ್ನು ರಾಜಸ್ತಾನ ರಾಯಲ್ಸ್ ತಂಡದಪರವಾಗಿ ಆಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


