ಡೆಲ್ಲಿ ಕ್ಯಾಪಿಟಲ್ಸ್‌ಗೆ ಭಾರಿ ಆಘಾತ: ಅಮಿತ್ ಮಿಶ್ರಾಗೆ ಗಾಯ, ಮುಂದಿನ ಪಂದ್ಯಗಳಿಗೆ ಅಲಭ್ಯ
13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ಫೇವರಿಟ್ ತಂಡಗಳಲ್ಲಿ ಒಂದಾಗಿರುವ ಡೆಲ್ಲಿ ಕ್ಯಾಪಿಟಲ್ಸ್‌ಗೆ ಭಾರಿ ಆಘಾತ ಎದುರಾಗಿದ್ದು, ತಂಡದ ಪ್ರಮುಖ ಸ್ಪಿನ್ನರ್ ಅಮಿತ್ ಮಿಶ್ರಾ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ಹೊರ ಬಿದ್ದಿದ್ದಾರೆ.

ನವದೆಹಲಿ: 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ಫೇವರಿಟ್ ತಂಡಗಳಲ್ಲಿ ಒಂದಾಗಿರುವ ಡೆಲ್ಲಿ ಕ್ಯಾಪಿಟಲ್ಸ್‌ಗೆ ಭಾರಿ ಆಘಾತ ಎದುರಾಗಿದ್ದು, ತಂಡದ ಪ್ರಮುಖ ಸ್ಪಿನ್ನರ್ ಅಮಿತ್ ಮಿಶ್ರಾ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ಹೊರ ಬಿದ್ದಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ಹಿರಿಯ ಸ್ಪಿನ್ನರ್ ಅಮಿತ್ ಮಿಶ್ರಾ ಬೆರಳಿನ ಗಾಯದಿಂದ ಬಳಲುತ್ತಿದ್ದು, ಐಪಿಎಲ್ 2020 ರ ಉಳಿದ ಪಂದ್ಯದಿಂದ ಹೊರಗುಳಿದಿದ್ದಾರೆ. ಅಕ್ಟೋಬರ್ 3 ರಂದು ಕೆಕೆಆರ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ವೇಳೆ ಪೆಟ್ಟು ಬಿದ್ದಿದ್ದು, ಬೌಲಿಂಗ್ ಮಾಡುವ ಕೈಯ ಉಂಗುರದ ಬೆರಳಿಗೆ ಗಾಯವಾಗಿತ್ತು. ಮಿಶ್ರಾ ಈ ಋತುವಿನಲ್ಲಿ ಮೂರು ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದು, ಮೂರು ವಿಕೆಟ್ ಪಡೆದಿದ್ದಾರೆ.
ಇದೇ ವಿಚಾರವಾಗಿ ಡೆಲ್ಲಿ ಕ್ಯಾಪಿಟಲ್ಸ್ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, 'ಡೆಲ್ಲಿ ಕ್ಯಾಪಿಟಲ್ಸ್‌ನ ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ ಐಪಿಎಲ್ 2020 ಟೂರ್ನಿಯ ಉಳಿದೆಲ್ಲಾ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. 37 ವರ್ಷದ ಅನುಭವಿ ಕ್ರಿಕೆಟಿಗನ ಬಲಗೈನ (ಬೌಲಿಂಗ್ ಮಾಡಲು ಬಳಸುವ) ಉಂಗುರ ಬೆರಳಿನ ಮೂಳೆ ಮುರಿದಿದೆ. ಅಕ್ಟೋಬರ್ 3ರಂದು ಶಾರ್ಜಾದಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ ಮಾಡುವಾಗ ಕ್ಯಾಚ್ ಪಡೆಯುವ ಪ್ರಯತ್ನದಲ್ಲಿ ಅವರ ಕೈ ಬೆರಳಿಗೆ ಗಾಯವಾಗಿತ್ತು ಎಂದು ಹೇಳಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಪಂದ್ಯದಲ್ಲಿ ಬೌಲಿಂಗ್ ಮಾಡುವಾಗ ನಿತೀಶ್ ರಾಣಾ ಅವರ ಬಾರಿಸಿದ ಚೆಂಡನ್ನು ರಿಟರ್ನ್ ಕ್ಯಾಚ್ ತೆಗೆದುಕೊಳ್ಳಲು ಪ್ರಯತ್ನಿಸುವಾಗ ಮಿಶ್ರಾ ಗಾಯಗೊಂಡರು. ಮಿಶ್ರಾ ಅಡ್ಡಲಾಗಿ ಬಿದ್ದ ಪರಿಣಾಮ ಚೆಂಡಿನ ಕೆಳಗೆ ಕೈ ಹೋಯಿತು. ಆದರೆ ಹಿಡಿಯಲು ಸಾಧ್ಯವಾಗಲಿಲ್ಲ. ಈ ವೇಳೆ ಮಿಶ್ರಾ ಗಾಯಕ್ಕೆ ತುತ್ತಾದರು. ಅವರು ಮತ್ತೊಂದು ಓವರ್ ಎಸೆದು, ಶುಭ್ ಮನ್ ಗಿಲ್ ಅವರನ್ನು ಸಹ ಔಟ್ ಮಾಡಿದರು. ಆದರೆ ಅದರ ನಂತರ ಮತ್ತೆ ಬೌಲಿಂಗ್ ಮಾಡಲಿಲ್ಲ. ಮಿಶ್ರಾ ಈ ಹಂತದಲ್ಲಿ 2 ಓವರ್‌ಗಳಲ್ಲಿ 14 ರನ್ ನೀಡಿ 1 ವಿಕೆಟ್‌ಗಳನ್ನು ಗಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


